ಕಾಶಿ, ಮಥುರಾದಲ್ಲಿ ಮಸೀದಿ ಧ್ವಂಸ ಮಾಡಿ ದೇಗುಲ ನಿರ್ಮಾಣ ಮಾಡುತ್ತೇವೆ:  ಕೆ.ಎಸ್. ಈಶ್ವರಪ್ಪ - Mahanayaka

ಕಾಶಿ, ಮಥುರಾದಲ್ಲಿ ಮಸೀದಿ ಧ್ವಂಸ ಮಾಡಿ ದೇಗುಲ ನಿರ್ಮಾಣ ಮಾಡುತ್ತೇವೆ:  ಕೆ.ಎಸ್. ಈಶ್ವರಪ್ಪ

eshwarappa
02/03/2023

ಚಾಮರಾಜನಗರ: 2024ಕ್ಕೆ ಮತ್ತೇ ನರೇಂದ್ರ ಮೋದಿ ಸರ್ಕಾರ ಬರಲಿದೆ, ಕಾಶಿ, ಮಥುರ ಮಸೀದಿ ಧ್ವಂಸ ಮಾಡುತ್ತೇವೆ ಎಂದು ಮಾಜಿ ಸಚಿವ ಈಶ್ವರಪ್ಪ ಮತ್ತೆ ಮಂದಿರ ನಿರ್ಮಾಣದ ಹೇಳಿಕೆ ಕೊಟ್ಟಿದ್ದಾರೆ.

ಗುಂಡ್ಲುಪೇಟೆಯಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥ ಯಾತ್ರೆಯಲ್ಲಿ ಅವರು ಮಾತನಾಡಿ, ಕಾಶಿಯಲ್ಲಿ ಹಾಗೂ ಮಥುರದಲ್ಲಿ ದೇಗುಲ ಒಡೆದು ಮಸೀದಿ ಕಟ್ಟಿದ್ದಾರೆ, ಅವೆರಡು ಮಸೀದಿಯನ್ನು ಧ್ವಂಸ ಮಾಡಿ ಮಂದಿರ ಕಟ್ಟುತ್ತೇವೆ ಎನ್ನುವ ಮೂಲಕ ಶ್ರೀರಾಮ ಮಂದಿರದ ಬಳಿಕ ಮತ್ತೇ ಮಂದಿರದ ಅಸ್ತ್ರವನ್ನು ಈಶ್ವರಪ್ಪ ಪ್ರಯೋಗ ಮಾಡಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗುತ್ತಿದೆ, ಉದ್ಘಾಟನೆಯಾದ ಬಳಿಕ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೋಗಿ ಬರಲಿ, ಅವರ ಪಾಪವಾದರೂ ಕಡಿಮೆಯಾಗಲಿದೆ ಎಂದು ಕೈ ನಾಯಕರ ವಿರುದ್ಧ ಕಿಡಿಕಾರಿದರು.

ಆಣೆ-ಪ್ರಮಾಣ ಸವಾಲು: ತಮ್ಮ ಪದವಿಗೆ ಆಕಾಂಕ್ಷಿ ಎಂದು ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ಸೋಲಿಸಿದರು. ಮೈಸೂರಿನ ಚಾಮುಂಡೇಶ್ವರಿಯಲ್ಲಿ ಪರಮೇಶ್ವರ್ ಶಿಷ್ಯರು, ಅಭಿಮಾನಿಗಳು ಬಂದು ಸಿದ್ದರಾಮಯ್ಯರನ್ನು ಸೋಲಿಸಿದರು, ಪರಮೇಶ್ವರ್ ಹಾಗೂ ಸಿದ್ದರಾಮಯ್ಯ ಚಾಮುಂಡೇಶ್ವರಿ ಮೇಲೆ ಆಣೆ ಮಾಡಿ ಹೇಳಲಿ..! ಅವರು ಹೇಳಿದ ಹಾಗೆ ಕೇಳುತ್ತೇನೆ ಎಂದು ಆಣೆ-ಪ್ರಮಾಣದ ಸವಾಲೆಸೆದರು.

ದಲಿತರ ಶಾಪದಿಂದಲೇ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು,  ಸಿದ್ದರಾಮಯ್ಯಗೆ ಇನ್ನೂ ಕ್ಷೇತ್ರವೇ ಗೊತ್ತಾಗಿಲ್ಲ. ಅವರು ಕೋಲಾರಕ್ಕೆ ಹೋದರೆ ಬ್ರಹ್ಮ ಬಂದರು ಗೆಲ್ಲುವುದಿಲ್ಲ. ಕೋಲಾರದಲ್ಲಿ ಎಲ್ಲ ಸಮುದಾಯದವರು ಸಿದ್ದರಾಮಯ್ಯ ಅವರನ್ನು ಸೋಲಿಸಲು ಕಾಯುತ್ತಿದ್ದಾರೆ. ಕಾಂಗ್ರೆಸ್ ನವರು ಜಾತಿವಾದಿಗಳು, ನಾವು ರಾಷ್ಟ್ರೀಯ ವಾದಿಗಳು.

ಸಿದ್ದರಾಮಯ್ಯ ಮತ್ತು ಜಮೀರ್ ಅಹಮದ್ ಇವರಿಬ್ಬರು ಜಿನ್ನಾ ಸಂತತಿಯವರು ಎಂದು ಕಟುವಾಗಿ ಟೀಕಿಸಿದರು.

ಒಬ್ಬರ ಕಾಲು ಒಬ್ಬರು ಎಳೆಯುವುದೇ ಕಾಂಗ್ರೆಸ್ ಕೆಲಸವಾಗಿದೆ. ಚುನಾವಣೆಯಾಗದೇ ಅವರವರೇ ಸಿಎಂ ಎಂದು ಘೋಷಣೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈ ಬಾರಿ ಬಿಜೆಪಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿಯಲ್ಲಿ ಅಮಿತ್ ಷಾ, ವಿಶ್ವನಾಯಕ ಮೋದಿ ಇದ್ದಾರೆ ಅದಕ್ಕಾಗಿ ಅವರನ್ನು ನಾವು ರಾಜ್ಯಕ್ಕೆ ಕರೆದುಕೊಂಡು ಬಂದಿದ್ದೇವೆ. ನೀವು ನಿಮ್ಮ ರಾಹುಲ್ ಗಾಂಧಿ,ಸೋನಿಯಾ ಗಾಂಧಿ ಅವರನ್ನು ರಾಜ್ಯಕ್ಕೆ ಕರೆದುಕೊಂಡು ಬನ್ನಿ, ರಾಗಾ, ಸೋನಿಯಾ ಹೋದ ಕಡೆಯಲೆಲ್ಲಾ ಅವರ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ನನಗೆ ಭರವಸೆ ಇದೆ ಈ ಬಾರಿ ಚಾಮರಾಜನಗರದ 4 ಕ್ಷೇತ್ರಗಳಲ್ಲಿ ಕಮಲ ಅರಳಲಿದೆ, ಈ ಬಾರಿ ನಿರಂಜನಕುಮಾರ್ 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ