ಕಾಂಗ್ರೆಸ್ ನ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ಜಾರಿಗೆ ತರುತ್ತೇವೆ:ಮಲ್ಲಿಕಾರ್ಜುನ ಖರ್ಗೆ - Mahanayaka

ಕಾಂಗ್ರೆಸ್ ನ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ಜಾರಿಗೆ ತರುತ್ತೇವೆ:ಮಲ್ಲಿಕಾರ್ಜುನ ಖರ್ಗೆ

mallikargunna karge
02/05/2023


Provided by

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೊದಲ‌ಸಂಪುಟ ಸಭೆಯಲ್ಲಿಯೇ
ಕಾಂಗ್ರೆಸ್ ನ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ಜಾರಿಗೆ ತರುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್, ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ,  ಮನೆ ಯಜಮಾನಿಗೆ 2 ಸಾವಿರ ರೂಪಾಯಿ, ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂಪಾಯಿ, ಡಿಪ್ಲೊಮೊ ಪದವೀಧರರಿಗೆ 1,500 ರೂಪಾಯಿ ಆರ್ಥಿಕ ನೆರವು  ಈ 5 ಗ್ಯಾರಂಟಿಗಳನ್ನು ಗ್ಯಾರಂಟಿ ನಾವು

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಈ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮೊದಲ ದಿನವೇ ಮಂಜೂರು ಮಾಡಿ ಜನರ ಕೈಗೆ ತಲುಪಿಸುತ್ತೇವೆ ಎಂದರು.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕೊಟ್ಟಿರುವ 5 ಪ್ರಮುಖ ಭರವಸೆಗಳನ್ನು ಈಡೇರಿಸಿದರೆ ರಾಜ್ಯ ದಿವಾಳಿಯಾಗುತ್ತದೆ, ಇವರಿಗೆ ಗ್ಯಾರಂಟಿ ಈ ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಯವರು ಹೇಳುತ್ತಾರೆ. ಅವರಿಂದ ನಾನು ಈ ಮಾತು ನಿರೀಕ್ಷೆ ಮಾಡಿರಲಿಲ್ಲ, ಹಾಗಾದರೆ ಬಿಜೆಪಿ ಕೊಟ್ಟಿರುವ ಭರವಸೆಗಳಿಂದ ರಾಜ್ಯ ಏನಾಗುತ್ತದೆ ಎಂದು ಪ್ರಶ್ನಿಸಿದರು.

ಇವತ್ತು 56 ಸಾವಿರ ಕೋಟಿ ರೂಪಾಯಿ ರಾಜ್ಯದಲ್ಲಿ ಅಸಲು ಮತ್ತು ಬಡ್ಡಿ ಕಟ್ಟಬೇಕಾಗಿದೆ, ಎಲ್ಲಿಂದ ಕಟ್ಟುತ್ತಾರೆ. ನಾನು ಮುಖ್ಯಮಂತ್ರಿಯಾಗುವವರೆಗೆ ಸ್ವಾತಂತ್ರ್ಯ ಬಂದಲ್ಲಿಂದ ರಾಜ್ಯದ ಮೇಲಿದ್ದ ಸಾಲ 2 ಲಕ್ಷದ 42 ಸಾವಿರ ಕೋಟಿ ಈ 5 ವರ್ಷದಲ್ಲಿ 5 ಲಕ್ಷದ 64 ಸಾವಿರ ಕೋಟಿಯಾಗಿದೆ. ಕೇವಲ 5 ವರ್ಷದಲ್ಲಿ 3 ಲಕ್ಷದ 22 ಸಾವಿರ ಕೋಟಿ ರೂಪಾಯಿ ಸಾಲ ಮಾಡಿದ್ದಾರೆ ಬಿಜೆಪಿಯವರು, ಹೀಗಾದರೆ ರಾಜ್ಯ ಉಳಿಯುತ್ತದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ