ದುರ್ಬಲಗೊಂಡ ಮುಂಗಾರು: ಮುಂದಿನ ದಿನಗಳಲ್ಲಿ ಹೇಗಿರಲಿದೆ ಮಳೆ? - Mahanayaka
2:41 AM Friday 11 - September 2026

ದುರ್ಬಲಗೊಂಡ ಮುಂಗಾರು: ಮುಂದಿನ ದಿನಗಳಲ್ಲಿ ಹೇಗಿರಲಿದೆ ಮಳೆ?

rain
30/07/2025

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಬಿಟ್ಟೂ ಬಿಡದೇ ತೀವ್ರವಾಗಿ ಮಳೆಯಾಗಿತ್ತು. ಇದೀಗ ಮುಂಗಾರು ಮಳೆ ದುರ್ಬಲಗೊಂಡಿದ್ದು, ಮುಂದಿನ ದಿನಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಜು.31ರಂದು ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಾಳೆ (ಜು.31) ಸಾಧಾರಣ ಮಳೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ.

ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜುಲೈ 31 ರಿಂದ ಆಗಸ್ಟ್​ 3ರ ವರೆಗೂ ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣ ಇರಲಿದೆ. ಮತ್ತು ಆಗಸ್ಟ್​ 2 ಮತ್ತು 3 ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರದಲ್ಲಿ ಜುಲೈ 31 ರಿಂದ ಆಗಸ್ಟ್​ 3ರ ವರೆಗೂ ಮೋಡಕವಿದ ವಾತಾವರಣ ಇರಲಿದೆ. ಆಗಸ್ಟ್​ 2 ಮತ್ತು 3 ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್​ ನಷ್ಟು ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler