ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವಿಡಿಯೋ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಒಂದು ವೇಳೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವೇ ಕೈಗೊಳ್ಳುತ್ತೇವೆ ಎಂದು ಹೇಳಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವೇ ಕೈಗೊಳ್ಳುತ್ತೇವೆ. ಸರ್ಕಾರ ಕ್ರಮ ಕೈಗೊಳ್ಳುವಂತೆ ಮತ್ತು ಈ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೋದ ಬಗ್ಗೆ ತೀವ್ರವಾಗಿ ವಿಚಲಿತರಾಗಿದ್ದೇವೆ. ಇದು ಸರ್ಕಾರ ಕ್ರಮಕೈಗೊಳ್ಳುವ ಸಮಯವಾಗಿದೆ.
ಇದು ಸ್ವೀಕಾರಾರ್ಹವಲ್ಲದ ಘಟನೆ. ಸರ್ಕಾರ ಕ್ರಮಕೈಗೊಳ್ಳದಿದ್ದರೆ, ನಾವು ಮಾಡುತ್ತೇವೆ. ಅಂತಹ ಹಿಂಸಾಚಾರಕ್ಕಾಗಿ ದುಷ್ಕರ್ಮಿಗಳ ವಿರುದ್ಧ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು.
ಮಾಧ್ಯಮಗಳು ಮತ್ತು ದೃಶ್ಯಗಳಲ್ಲಿ ಚಿತ್ರಿಸಿರುವುದು ಒಟ್ಟಾರೆಯಾಗಿ ಸಾಂವಿಧಾನಿಕ ಉಲ್ಲಂಘನೆ ತೋರಿಸುತ್ತದೆ ಎಂದು ಹೇಳಿದ್ದಾರೆ. ಜುಲೈ 28 ರಂದು ಈ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw