ಪಶ್ಚಿಮ ದೆಹಲಿಯಲ್ಲಿ ಬರ್ಗರ್ ಕಿಂಗ್ ಹತ್ಯೆ ಪ್ರಕರಣ: ಎನ್ ಕೌಂಟರ್ ನಲ್ಲಿ ಮೂವರು ಶೂಟರ್ ಗಳ ಹತ್ಯೆ

ಹರಿಯಾಣ ಪೊಲೀಸರು ಮತ್ತು ದೆಹಲಿ ಅಪರಾಧ ವಿಭಾಗವು ಸೋನಿಪತ್ ನಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ದರೋಡೆಕೋರರನ್ನು ಹತ್ಯೆ ಮಾಡಲಾಗಿದೆ. ಅವರಲ್ಲಿ ಇಬ್ಬರು ಕಳೆದ ತಿಂಗಳು ಪಶ್ಚಿಮ ದೆಹಲಿಯಲ್ಲಿ ನಡೆದ ಬರ್ಗರ್ ಕಿಂಗ್ ಸಿಬ್ಬಂದಿಯ ಹತ್ಯೆಯ ಹಿಂದೆ ಇದ್ದಾರೆ ಎಂದು ಆರೋಪಿಸಲಾಗಿದೆ.
ಜಂಟಿ ಕಾರ್ಯಾಚರಣೆಯ ಸಮಯದಲ್ಲಿ ಅಪರಾಧ ವಿಭಾಗದ ಸಬ್ ಇನ್ಸ್ ಪೆಕ್ಟರ್ ಅಮಿತ್ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಹಾಯಕ ಪೊಲೀಸ್ ಆಯುಕ್ತ ಉಮೇಶ್ ಭರತ್ವಾಲ್ ನೇತೃತ್ವದಲ್ಲಿ ಮತ್ತು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅಮಿತ್ ಗೋಯೆಲ್ ಅವರ ಮೇಲ್ವಿಚಾರಣೆಯಲ್ಲಿ ದೆಹಲಿ ಪೊಲೀಸ್ ಅಪರಾಧ ವಿಭಾಗದ ತಂಡವು ಈ ಕಾರ್ಯಾಚರಣೆಯನ್ನು ನಡೆಸಿತು.
ಹರಿಯಾಣ ಪೊಲೀಸ್ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಸದಸ್ಯರೂ ಗಾಯಗೊಂಡಿದ್ದಾರೆ ಎಂದು ಸೋನಿಪತ್ ನ ಪಶ್ಚಿಮ ಡಿಸಿಪಿ ನರೀಂದರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ. ಖಾರ್ಖೋಡಾದ ಚಿನೋಲಿ ರಸ್ತೆಯಲ್ಲಿ ಎನ್ಕೌಂಟರ್ ನಡೆದಿದೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ಉಲ್ಲೇಖಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth