ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದೇನು?

ನಾನು ಚುನಾವಣೆಯಲ್ಲಿ ಸೋತ ಕ್ಷಣ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂಬುದು ಸುಳ್ಳು, ಇಂತಹ ವದಂತಿಯನ್ನು ಕೆಲವರು ಹಬ್ಬಿಸುತ್ತಿದ್ದಾರೆ ಎಂದು ಮಾಜಿ ಸಚಿವ ಜೇ ಸಿ ಮಾಧುಸ್ವಾಮಿ ತಿಳಿಸಿದ್ದಾರೆ.
ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ನಾನು ಬಿಡುವುದಿಲ್ಲ, ಕಾಂಗ್ರೆಸ್ ಸೇರುವಂತಹ ದುಸ್ಥಿತಿಯು ನನಗೆ ಬಂದಿಲ್ಲ. ಇಂತಹ ವದಂತಿಗಳಿಗೆಲ್ಲ ಕಾರ್ಯಕರ್ತರು ಕಿವಿಗೊಡಬಾರದು ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಸೋತ ಕ್ಷಣ ಎಲ್ಲ ಮುಗಿದೆ ಹೋಯಿತು ಎಂದಲ್ಲ, ನಾನು ನಾಲ್ಕು ದಶಕಗಳಿಂದ ರಾಜಕೀಯ ಜೀವನದಲ್ಲಿದ್ದೇನೆ. ನನ್ನ ಸೋಲಿಗೆ ಯಾರನ್ನು ಹೊಣೆ ಮಾಡುವುದಿಲ್ಲ ಅದು ನನ್ನ ಹಣೆಬರಹ ಸೋತಾಗ ಒಂದಷ್ಟು ದಿನ ಮನಸ್ಸಿಗೆ ನೋವು ಆಗುವುದು ಸಹಜ ಎಂದು ಹೇಳಿದರು.
ಅಧಿಕಾರಕ್ಕೋಸ್ಕರ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರುವಂತಹ ದುಸ್ಥಿತಿ ನನಗೇನು ಬಂದಿಲ್ಲ ಪಕ್ಷ ನನಗೆ ಎಲ್ಲವನ್ನು ಕೊಟ್ಟಿದೆ. ಅದಕ್ಕಾಗಿ ಪಕ್ಷಕ್ಕೆ ಚಿರಋಣಿಯಾಗಿದ್ದೇನೆ ಎಂದು ಹೇಳಿದರು.
ವಿಡಿಯೋ ನೋಡಿ:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw