ವಿನೇಶ್ ಪೋಗಟ್ ಅನರ್ಹ ವಿಚಾರಕ್ಕೆ ಪ್ರಧಾನಿ ಮೋದಿ ಹೇಳಿದ್ದೇನು?
07/08/2024
ಅಧಿಕ ತೂಕದ ಕಾರಣ ನೀಡಿ ಕುಸ್ತಿಪಟು ವಿನೇಶ್ ಪೋಗಟ್ ಅವರನ್ನು ಅನರ್ಹಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ‘X’ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಕುಸ್ತಿಪಟು ವಿನೇಶ್ ಪೋಗಟ್’ ಅನರ್ಹ ವಿಚಾರ ತಿಳಿದು ಬಹಳ ನೋವಾಯಿತು. ವಿನೇಶ್, ನೀವು ಚಾಂಪಿಯನ್ ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿ ಎಂದು ಪ್ರಧಾನಿ ಹೇಳಿದರು.
ಇಂದಿನ ಹಿನ್ನಡೆ ನೋವುಂಟು ಮಾಡಿದೆ. ನಾನು ಅನುಭವಿಸುತ್ತಿರುವ ಹತಾಶೆಯ ಭಾವನೆಯನ್ನು ಪದಗಳು ವ್ಯಕ್ತಪಡಿಸಬೇಕೆಂದು ನಾನು ಬಯಸುತ್ತೇನೆ ಎಂದು ಮೋದಿ ಬರೆದುಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth