ನಟ ದರ್ಶನ್ ಜಾಮೀನು ಅರ್ಜಿ ಏನಾಯ್ತು?: ಇಲ್ಲಿದೆ ವಿವರ
30/09/2024
ನಟ ದರ್ಶನ್ ಅವರಿಗೆ ಇಂದು ಕೂಡ ಜಾಮೀನು ಭಾಗ್ಯ ದೊರೆತಿಲ್ಲ, ಸದ್ಯ ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿದೆ. ಹೀಗಾಗಿ ಅಲ್ಲಿಯವರೆಗೂ ದರ್ಶನ್ ಜೈಲಿನಲ್ಲೇ ಕಳೆಯಬೇಕಿದೆ.
ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿರುವ ಹಿನ್ನೆಲೆ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ ಎಂದು ತಿಳಿದು ಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್ ಹಾಗೂ ನಿಖಿಲ್ ನಾಯಕ್ ಅವರಿಗೆ ವಾದ ಹಿಂದೆಯೇ ಜಾಮೀನು ಮಂಜೂರಾಗಿತ್ತು. ಇದೀಗ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನಿಗಾಗಿ ಕರಸತ್ತು ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: