10:41 AM Thursday 23 - October 2025

ಏನು ಸಾಧನೆ ಆಗಿದೆ ಅಂತ ಸಾಧನಾ ಸಮಾವೇಶ ಮಾಡಿದ್ರು?: ನಿಖಿಲ್ ಕುಮಾರಸ್ವಾಮಿ ಕಿಡಿ

nikhil kumaraswamy
25/07/2025

ಚಿಕ್ಕಮಗಳೂರು : ಜಿಪಂ, ತಾಪಂ ಚುನಾವಣೆ ಮಾಡಿ ಅಂತ ಕೋರ್ಟ್ ಸೂಚನೆ ನೀಡಿದೆ, ಎಲೆಕ್ಷನ್ ಮಾಡಿದ್ರೆ ಏನಾಗುತ್ತೋ ಅಂತ ಸರ್ಕಾರಕ್ಕೆ ಆತ್ಮವಿಶ್ವಾಸವೇ ಇಲ್ಲ, 3 ವರ್ಷ ಎಷ್ಟು ಆಗುತ್ತೋ ಅಷ್ಟು ದುಡ್ಡು ಮಾಡಿಕೊಳ್ಳೋಕೆ ಮಾನಸಿಕವಾಗಿ ಸಿದ್ಧರಾಗಿದ್ದಾರೆ, ಮುಂದೆ ಅದೇ ದುಡ್ಡಲ್ಲಿ ಮತ್ತೆ ಎಲೆಕ್ಷನ್ ಮಾಡೋಕೆ ಸಿದ್ಧರಾಗಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬಾಳೆಹೊನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಲ್ಲಿ ಅದೆಂತದ್ದೋ ಸಾಧನಾ ಸಮಾವೇಶ ಮಾಡಿದ್ರು, ರಾಜ್ಯದಲ್ಲಿ ಏನು ಸಾಧನೆ ಆಗಿದೆ ಅಂತ ಕಾಂಗ್ರೆಸ್ಸಿಗರೇ ಉತ್ತರ ಕೊಡಬೇಕಿದೆ ಎಂದು ಪ್ರಶ್ನಿಸಿದರು.

ಸಿಎಂ ಕುರ್ಚಿ ಬಗ್ಗೆ ಯಾವುದೇ ಒಳ ಒಪ್ಪಂದ ಇಲ್ಲ, ನಾನೇ 5 ವರ್ಷ ಸಿಎಂ ಅಂತಾರೆ, ರಾಜ್ಯದ ಅಭಿವೃದ್ಧಿ, ಜನರ ಕಷ್ಟಕ್ಕಿಂತ ಇವರಿಗೆ ಸಿಎಂ ಕುರ್ಚಿ ಕಿತ್ತಾಟವೇ ಮುಖ್ಯವಾಗಿದೆ, ಸಿಎಂ ಕುರ್ಚಿ ಉಳಿಸಿಕೊಳ್ಳಬೇಕು, ಡಿಸಿಎಂಗೆ ಸಿಎಂ ಕುರ್ಚಿ ಬೇಕು, ಮತ್ತೊಬ್ಬರಿಗೆ ಅಧ್ಯಕ್ಷರ ಕುರ್ಚಿ ಮೇಲೆ ಕಣ್ಣು. ಈ ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ ಎಂದು ನಿಖಿಲ್ ದೂರಿದರು.

2 ವರ್ಷಗಳ ಇವರ ಆಡಳಿತದ ವೈಖರಿ ನೋಡಿ ಜನ ಚರ್ಚೆ ಮಾಡಲು ಶುರು ಮಾಡಿದ್ದಾರೆ ಎಂದು ಅವರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version