ಹತ್ತು ವರ್ಷದಲ್ಲಿ ಮೋದಿ ಸರ್ಕಾರದ ಸಾಧನೆ ಏನಿದೆ?: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಅಸೆಂಬ್ಲಿ ಚುನಾವಣೆಗೆ ಮುನ್ನ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಸರ್ಕಾರ ಅಧಿಕಾರಕ್ಕೆ ಬಂದಾಗ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ ಎಂದು ಚುನಾವಣಾ ಪ್ರಚಾರದ ವೇಳೆ ಪ್ರಿಯಾಂಕ್ ಖರ್ಗೆ ಹೇಳಿದರು.
ಆರ್ಥಿಕ ಸದೃಢತೆ ಹಾಗೂ ಸಾಮಾಜಿಕ ಸಮಾನತೆಯನ್ನು ರೂಪಿಸುವಂತಹ ಸರ್ಕಾರವನ್ನು ರಚಿಸುವ ಶಕ್ತಿ ಮತದಾರರಿಗೆ ಇದೆ. ಹಾಗಾಗಿ ಮತದಾರರು ತಮ್ಮ ಅಮೂಲ್ಯ ಮತದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಜನಪರ ಸೇವೆ ಮಾಡುವ ಸರ್ಕಾರ ಬರುವಂತೆ ನೋಡಿಕೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಇನ್ನು ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗುತ್ತಿದೆ. ಎಲ್ಲ ಯೋಜನೆಗಳನ್ನು ಜಾರಿಗೆ ತರಲು ವಾರ್ಷಿಕ 52,000 ಕೋಟಿ ರೂಪಾಯಿ ಬೇಕಾಗುತ್ತದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಮಹಿಳೆಯರಿಗೆ ಆರ್ಥಿಕ ಸಬಲತೆ ರೂಪಿಸುವ ಯೋಜನೆಗಳು ನಮ್ಮ ಸರ್ಕಾರದ ಸಾಧನೆಯಾಗಿದೆ ಎಂದರು.
ಹತ್ತು ವರ್ಷದಲ್ಲಿ ಮೋದಿ ಸರ್ಕಾರದ ಸಾಧನೆ ಏನಿದೆ ಎಂದು ಪ್ರಶ್ನಿಸಿದ ಖರ್ಗೆ, ರಾಜ್ಯದಲ್ಲಿ ಭೀಕರ ಬರಗಾಲ ಇದೆ ತಂಡ ಕಳಿಸಿ ಎಂದು ಮನವಿ ಮಾಡಿದ್ದೇವೆ. ಅಧಿಕಾರಿಗಳ ತಂಡ ಬಂದು ಸಮೀಕ್ಷೆ ಮಾಡಿತು. ಅವರ ವರದಿಯಂತೆ 48 ಲಕ್ಷ ಹೆಕ್ಟರ್ ಬೆಳೆ ಹಾನಿಯಾಗಿದೆ ಹಾಗಾಗಿ 18,171 ಕೋಟಿ ಬರ ಪರಿಹಾರ ನೀಡಿ ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ನಯಾಪೈಸೆ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth