ನಿಮ್ಮ ಜಿಲ್ಲೆಯಲ್ಲಿ ಚುನಾವಣೆ ನಡೆಯುವ ದಿನಾಂಕ ಯಾವುದು? | ಇಲ್ಲಿದೆ ರಿಪೋರ್ಟ್

rajeev kumar
16/03/2024

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಎಪ್ರಿಲ್ 26 ಹಾಗೂ ಮೇ 7ರಂದು ಚುನಾವಣೆ ನಡೆಯಲಿದೆ. ಈ ಬಗ್ಗೆ ಇಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ರಾಜೀವ್ ಕುಮಾರ್ ದಿನಾಂಕ ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಯಾವ ಜಿಲ್ಲೆಯಲ್ಲಿ ಯಾವ ದಿನಾಂಕದಂದು ಚುನಾವಣೆ ನಡೆಯಲಿದೆ ಎನ್ನುವ ಮಾಹಿತಿ ಇಲ್ಲಿದೆ.

ದಕ್ಷಿಣ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, ಉತ್ತರ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 26 ರಂದು ರಾಜ್ಯದ ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರದಲ್ಲಿ ಮತದಾನ ನಡೆಯಲಿದೆ.

ಮೇ 7 ರಂದು ಎರಡನೇ ಹಂತದಲ್ಲಿ ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್​, ಹುಬ್ಬಳಿ –- ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರದಲ್ಲಿ ಮೇ 7 ರಂದು ಚುನಾವಣೆ ನಡೆಯಲಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version