ಒಡಿಶಾ ಭೀಕರ ರೈಲು ಅಪಘಾತಕ್ಕೆ ಕಾರಣ ಏನು? - Mahanayaka

ಒಡಿಶಾ ಭೀಕರ ರೈಲು ಅಪಘಾತಕ್ಕೆ ಕಾರಣ ಏನು?

odisha2
03/06/2023

ಒಡಿಶಾ ರೈಲು ದುರಂತಕ್ಕೆ ರೈಲು ಡಿಕ್ಕಿ ತಡೆ ವ್ಯವಸ್ಥೆ “ಕವಾಚ್” ಅಳವಡಿಸದೇ ಇರುವುದೇ ಕಾರಣ ಎಂದು ಹೇಳಲಾಗಿದ್ದು, ಈ ಬಗ್ಗೆ ಆಗ್ನೇಯ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಯಲಿದೆ.
SE ಸರ್ಕಲ್ ಸಿಆರ್ ಎಸ್, ಎ.ಎಂ. ಚೌಧರಿ ಅವರು ಅಪಘಾತದ ಬಗ್ಗೆ ತನಿಖೆ ನಡೆಸುತ್ತಾರೆ ಎಂದು ಭಾರತೀಯ ರೈಲ್ವೆಯ ವಕ್ತಾರರು ತಿಳಿಸಿದ್ದಾರೆ. ರೈಲ್ವೆ ಇಲಾಖೆ ಈ ಮಾರ್ಗದಲ್ಲಿ ರೈಲು ಡಿಕ್ಕಿ ತಡೆ ವ್ಯವಸ್ಥೆ “ಕವಾಚ್” ಈ ಮಾರ್ಗದಲ್ಲಿ ಅಳವಡಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಒಡಿಶಾ ರೈಲು ದುರಂತಕ್ಕೆ ಸ್ಪಷ್ಟವಾದ ಕಾರಣಗಳು ದೊರೆತಿಲ್ಲವಾದರೂ, ಸಿಗ್ನಲಿಂಗ್ ವೈಫಲ್ಯವೇ ಈ ಅಪಘಾತಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ಸಂಭವಿಸಿದ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡ ಭೀಕರ ಅಪಘಾತದಲ್ಲಿ ಕನಿಷ್ಠ 261 ಜನ ಸಾವನ್ನಪ್ಪಿದ್ದಾರೆ ಮತ್ತು 900ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

 ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ