5:45 PM Wednesday 15 - October 2025

ವಾಟ್ಸಾಪ್ ಗ್ರೂಪ್ ಅಡ್ಮೀನ್ ಗಳಿಗೆ ಸಿಹಿ ಸುದ್ದಿ

whatsapp group admin
26/04/2021

ಮುಂಬೈ: ವಾಟ್ಸಾಪ್ ಗ್ರೂಪ್ ನಲ್ಲಿ ಸದಸ್ಯರು ಹಾಕುವ ಪೋಸ್ಟ್ ಗಳಿಗೆ ಗ್ರೂಪ್ ನ ನಿರ್ವಾಹಕರೇ ಹೊಣೆಯಾಗಿ ಬಹಳಷ್ಟು ಅಮಾಯಕರು ಜೈಲು ಸೇರಿದ್ದರು. ಆದರೆ ಬಾಂಬೆ ಹೈಕೋರ್ಟ್ ನ ಪೀಠ ನೀಡಿರುವ ಮಹತ್ವದ ಆದೇಶ ಗ್ರೂಪ್ ಅಡ್ಮೀನ್ ಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ.

 ಮಹಿಳೆಗೆ ಸಂಬಂಧಿಸಿದಂತೆ ವಾಟ್ಸ್ ಆಪ್ ಗ್ರೂಪ್ ಒಂದರ ಸದಸ್ಯರೊಬ್ಬರು ಆಕ್ಷೇಪಾರ್ಹವಾಗಿ ಪೋಸ್ಟ್ ನ್ನು ಹಾಕಿದ್ದರು. ಇದರ ವಿರುದ್ಧ ವಾಟ್ಸ್ ಆಪ್ ಗ್ರೂಪ್ ನ ನಿರ್ವಾಹಕರಾದ ಕಿಶೋರ್ ಟ್ಯಾರೋನ್ (33) ಎಂಬಾತನ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ಮಹಿಳೆಯೊಬ್ಬರು ದಾಖಲಿಸಿದ್ದರು.

 ಮಹಿಳೆಯ ಕುರಿತಾದ ಆಕ್ಷೇಪಾರ್ಹ ಪೋಸ್ಟ್ ನ್ನು ನಿರ್ವಾಹಕರು ಡಿಲೀಟ್ ಮಾಡಿಲ್ಲ ಹಾಗೂ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಕ್ಷಮೆ ಕೋರುವಂತೆ ಕೇಳಲಿಲ್ಲ ಎಂದು ಮಹಿಳೆ ಆರೋಪಿಸಿದ್ದರು. ಆದರೆ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕಿಶೋರ್ ಟ್ಯಾರೋನ್ ಎಂಬ ವ್ಯಕ್ತಿ ಕೋರ್ಟ್ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ಝೆದ್ ಎ ಹಕ್ ಹಾಗೂ ಎಬಿ ಬೋರ್ಕಾರ್ ಅವರಿದ್ದ ಪೀಠ, ವಾಟ್ಸ್ ಆಪ್ ಗ್ರೂಪ್ ನ ನಿರ್ವಾಹಕರು ಗುಂಪಿನ ಸದಸ್ಯರು ಹಾಕುವ ಪೋಸ್ಟ್ ಗಳಿಗೆ ಹೊಣೆಯಾಗುವುದಿಲ್ಲ, ಅವರನ್ನು ಹೊಣೆಗಾರರನ್ನಾಗಿ ಮಾಡಲಾಗದು ಎಂದು ಹೇಳಿದೆ.

ವಾಟ್ಸ್ ಆಪ್ ಗ್ರೂಪ್ ನ ನಿರ್ವಾಹಕರಿಗೆ ಸದಸ್ಯರು ಹಾಕುವ ಪೋಸ್ಟ್ ಗಳನ್ನು ನಿಯಂತ್ರಿಸುವುದಕ್ಕೆ ಅಥವಾ ಅದನ್ನು ಪ್ರಕಟಿಸುವ ಮೊದಲೇ ಸೆನ್ಸಾರ್ ಮಾಡುವುದಕ್ಕೆ ಅಧಿಕಾರವಿಲ್ಲ ಆದರೆ ಗುಂಪಿನ ಯಾವುದೇ ಸದಸ್ಯ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಬಹುದಾದಂತಹ ಅಂಶಗಳನ್ನು ಹಾಕಿದರೆ ಅಂತಹ ವ್ಯಕ್ತಿಯ ವಿರುದ್ಧ ಕ್ರಮ ಜರುಗಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ಇತ್ತೀಚಿನ ಸುದ್ದಿ

Exit mobile version