12:19 PM Saturday 12 - September 2026

ದರ್ಶನ್ ಪ್ರಕರಣ: ಮಗು ತಪ್ಪು ಮಾಡಿದಾಗ ತಂದೆ ಎಷ್ಟು ನೋವು ತಿಂತಾನೋ ಅಷ್ಟೇ ನೋವು ತಿಂದಿದ್ದೀನಿ: ಹಂಸಲೇಖ

darshan
01/07/2024

ಮಂಡ್ಯ: ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾದ ಬ್ರಹ್ಮ ಹಂಸಲೇಖ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು,  ಮಗು ತಪ್ಪು ಮಾಡಿದ್ರೆ ತಂದೆ ಎಷ್ಟು ನೋವು ತಿಂತಾನೋ, ನಾನೂ ಅಷ್ಟೇ ನೋವು ತಿಂದಿದ್ದೀನಿ. ಆ ಮಗು ಕೂಡ ಅಷ್ಟೇ ನೋವು ಅನುಭವಿಸುತ್ತಿರುತ್ತದೆ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ದರ್ಶನ್ ನನ್ನ ಮಗು ಅಂತ ತಿಳಿದುಕೊಳ್ಳಿ. ಮಗು ತಪ್ಪು ಮಾಡಿದ್ರೆ ತಂದೆ ಎಷ್ಟು ನೋವು ತಿಂತಾನೋ, ನಾನು ಅಷ್ಟೇ ನೋವು ತಿಂತಿದ್ದೀನಿ. ಆ ಮಗು ಕೂಡ ಅಷ್ಟೇ ನೋವು ತಿಂತಿರುತ್ತೆ. ನಾವು ಆತ ಕೊಟ್ಟಿರುವ ಕೊಡುಗೆ ಕಡೆ ಗಮನ ಕೊಡೋಣ ಎಂದು ಹೇಳಿದರು.

ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಗೆ ಬೀಳೋದು ಬೇಡ ಎಂದು ಆಶಿಸಿದ ನಾದಬ್ರಹ್ಮ,  ಕೇರಳ ಚಿತ್ರೋದ್ಯಮ ಹೀಗೇ ಆಗಿತ್ತು. ಅದೀಗ ಉತ್ತುಂಗದಲ್ಲಿದೆ. ಕೆಳಗೆ ಬಿದ್ದು ಮತ್ತೆ ಮೇಲೆ ಎದ್ದಿದೆ. ನಮ್ಮದು ಚಂದನವನ. ಒಂದು ಮಳೆಗೆ ಮರ ಒಣಗಿದರೇನಂತೆ. ಇನ್ನೊಂದು ಮಳೆಗೆ ಕಾಡು ಬೆಳೆದೇ ಬೆಳೆಯುತ್ತೆ ಎಂದು ಆಶಯ ವ್ಯಕ್ತಪಡಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version