10:00 AM Saturday 23 - August 2025

‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ಯಾವಾಗ?: ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

lakshmi hebalkar
15/06/2023

ಬೆಂಗಳೂರು: ರಾಜ್ಯ ವಿಧಾನ ಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ’, ‘ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಅವರು ಮಾಹಿತಿ ನೀಡಿದರು.

‘ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್ ಮಾಹಿತಿ ನೀಡಬೇಕು’ ಎಂದು ಅವರು ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

 

ಇತ್ತೀಚಿನ ಸುದ್ದಿ

Exit mobile version