ಹಿಂದೂ ಅನ್ನೋದು ಭಾರತೀಯ ಪದವಲ್ಲ, ಪರ್ಷಿಯನ್ ನ ಅಶ್ಲೀಲ ಪದ: ಸತೀಶ್ ಜಾರಕಿಹೊಳಿ - Mahanayaka

ಹಿಂದೂ ಅನ್ನೋದು ಭಾರತೀಯ ಪದವಲ್ಲ, ಪರ್ಷಿಯನ್ ನ ಅಶ್ಲೀಲ ಪದ: ಸತೀಶ್ ಜಾರಕಿಹೊಳಿ

sathish jarakiholi
07/11/2022

ಬೆಳಗಾವಿ: ಹಿಂದೂ ಪದವು ಪರ್ಷಿಯನ್ ಭಾಷೆಯಿಂದ ಬಂದಿರೋದು ಇದು ಭಾರತೀಯ ಪದವೇ ಅಲ್ಲ ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆನ್ನಲಾಗಿರುವ ವಿಡಿಯೋವೊಂದು ವೈರಲ್ ಆಗಿದ್ದು,  ಈ ವಿಡಿಯೋದಲ್ಲಿ ಮಾತನಾಡುತ್ತಿರುವ ಸತೀಶ್ ಜಾರಕಿಹೊಳಿ, ಹಿಂದೂ ಅನ್ನೋ ಪದ ಭಾರತ ಮೂಲದ್ದಲ್ಲ, ಅದು ಪರ್ಷಿಯನ್ ಮೂಲದ್ದು. ಭಾರತಕ್ಕೂ ಪರ್ಷಿಯನ್ ಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಅನ್ನೋದು ಹೇಗೆ ನಮ್ಮದಾಯ್ತು ಅನ್ನೋದನ್ನು ಚರ್ಚೆ ಮಾಡಬೇಕಿದೆ. ಹಿಂದೂ ಎಂಬ ಪರ್ಷಿಯನ್ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಿಮಗೆ ನಾಚಿಕೆಯಾಗುತ್ತದೆ ಎಂದು ಅವರು ಹೇಳಿದರು.

ಎಲ್ಲಿಂದಲೋ ಬಂದಿರುವ ಧರ್ಮವನ್ನು ತಂದು ಒತ್ತಾಯ ಪೂರ್ವಕಾವಾಗಿ ಹೇರಲಾಗುತ್ತಿದೆ ಎಂದು ಅವರು ಹೇಳಿಕೆ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪರ ವಿರೋಧ ಚರ್ಚೆಗೆ ಕಾರಣವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ