ಕಲ್ಲಡ್ಕ ಪ್ರಭಾಕರ್ ಭಟ್ ಆಗಲಿ, ಅವರಪ್ಪ ಆಗಲಿ ಕಾನೂನು ಎಲ್ಲರಿಗೂ ಒಂದೇ: ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಬೆಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಆಗಲಿ ಅವರಪ್ಪ ಆಗಲಿ ಕಾನೂನು ಎಲ್ಲರಿಗೂ ಒಂದೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಪಥ ಸಂಚಲನ ಮಾಡೇ ಮಾಡ್ತೀವಿ ಅನ್ನೋ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ಸಂಬಂಧ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಕಲ್ಲಡ್ಕ ಪ್ರಭಾಕರ್ ಭಟ್ ಯಾರು? ಕೋರ್ಟ್‌ಗಿಂತ ಅವರು ದೊಡ್ಡವರಾ? ಮಾಡಲಿ ನೋಡೋಣ. ಕೋರ್ಟ್ ಅನುಮತಿ ಸಿಗದೇ ಮಾಡುತ್ತಾರಾ? ಅನುಮತಿ ಇಲ್ಲದೇ ಮಾಡಿದರೆ ಸರ್ಕಾರ ಕತ್ತೆ ಕಾಯುತ್ತಿರುತ್ತಾ? ಅನುಮತಿ ತಗೆದುಕೊಳ್ಳಲೇ ಬೇಕು ಎಂದು ವಾಗ್ದಾಳಿ ನಡೆಸಿದರು.
ಬಹಿರಂಗ ಚರ್ಚೆಗೆ ಬನ್ನಿ ಎಂದರೂ ಚರ್ಚೆಗೆ ಬರಲ್ಲ. ಏನಾದ್ರೂ ಕಂಟೆಂಟ್ ಇದ್ರೆ ಬರುತ್ತಿದ್ದರು. ಬರೀ ವೈಯಕ್ತಿಕವಾಗಿ ಮಾತನಾಡುತ್ತಾರೆ. ಆರ್ ಎಸ್ ಎಸ್ ರಿಜಿಸ್ಟರ್ ಆಗಿದ್ಯಾ ಎಂದು ಕೇಳಿದ್ರೆ ತಪ್ಪಾ? ದಾಖಲೆ ತಂದು ಮುಖದ ಮೇಲೆ ಬಿಸಾಕಲಿ. ಇವರಿಗೆ ಎಲ್ಲಿಂದ ದೇಣಿಗೆ ಸಿಗುತ್ತಿದೆ? ದೇವಸ್ಥಾನದ ಹುಂಡಿ ಲಾಕ್ ಆಗಿರುತ್ತೆ. ಅದನ್ನ ತೆಗೆಯಬೇಕಾದರೆ ತಹಶೀಲ್ದಾರ್ ಬರಬೇಕು, ಎಲ್ಲವನ್ನೂ ಪಾರದರ್ಶಕವಾಗಿ ತೆಗೆಯುತ್ತಾರೆ. ಆದರೆ ಆರ್ ಎಸ್ ಎಸ್ ಗೆ ಎಲ್ಲಿಂದ ದೇಣಿಗೆ ಬರುತ್ತಿದೆ. ದೇಣಿಗೆ ಮೂಲ ಗೊತ್ತಾಗಬೇಕಲ್ವಾ? ರಾಜ್ಯ, ದೇಶ, ವಿದೇಶದಿಂದ ಬರುತ್ತಿದ್ಯಾ? ಇದರ ಮೂಲ ಗೊತ್ತಾಗಬೇಕಲ್ವಾ? ದೇಶದ ದೊಡ್ಡ ಎನ್ ಜಿಓ ಅಂತ ಮೋದಿ ಹೇಳ್ತಾರಲ್ವಾ? ಅದರ ಲೆಕ್ಕವನ್ನು ಕೊಡಲಿ ಈಗ. ಸರ್ದಾರ್ ವಲ್ಲಬಾಯ್ ಪಟೇಲ್ ರಿಂದ ಹಿಡಿದು ಇಂದಿರಾಗಾಂಧಿವರೆಗೆ ನಾವು ದೊಡ್ಡ ಮನಸ್ಸು ಮಾಡಿಕೊಂಡು ಬಂದಿದ್ದೇವೆ, ಅದೇ ತಪ್ಪಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರ್‌ಎಸ್‌ಎಸ್ ಹೊಗಳೋದು ಬಿಜೆಪಿಯಲ್ಲಿ ಇರುವವರಿಗೆ ಅನಿವಾರ್ಯ, ಬಸವರಾಜ ಬೊಮ್ಮಾಯಿ ಸಾಹೇಬ್ರು ಎಲ್ಲ ಜ್ಞಾನ ಇರುವ ಮನುಷ್ಯ, ಕಾನೂನಿನ ಅರಿವು ಅವರಿಗೆ ತುಂಬಾ ಚೆನ್ನಾಗಿಯೇ ಇದೆ. ಸುಪ್ರೀಂ ಕೋರ್ಟ್ ತನಕ ಬೊಮ್ಮಾಯಿಯವರ ತಂದೆ ಹೋರಾಟ ಮಾಡಿದ್ರು. ಅದೇ ಜಡ್ಜ್ಮೆಂಟ್ ನೋಡಿಬಿಟ್ಟರೆ ಬೊಮ್ಮಾಯಿಯವರು ಬಿಜೆಪಿ ಬಿಟ್ಟು ಹೊರಗೆ ಬರುತ್ತಾರೆ. ಭಾರತೀಯ ಸಂಸ್ಕೃತಿಯ ವಾರಸುದಾರರ ಸಂಸ್ಕೃತಿ ಹೇಗಿದೆ ನೋಡಿ ಇವರ ಸಂಸ್ಕೃತಿ ಇದು. ಇವರೆಲ್ಲ ನಡೆಯಲಾರದ ನಾಣ್ಯಗಳು, ಇವರನ್ನು ಮುಂದೆ ಬಿಟ್ಟು ನಮ್ಮನ್ನು ಟೀಕೆ ಮಾಡಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























