12:01 PM Saturday 23 - August 2025

ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಇಲ್ಲಿದೆ ಹವಾಮಾನ ಇಲಾಖೆ ವರದಿ

rain1
01/09/2024

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು.

ಕೊಡಗು, ಹಾಸನ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಳ್ಳಾರಿ, ವಿಜಯಪುರ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.

ಚಿತ್ರದುರ್ಗ ಉತ್ತರ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.   ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸ್ವಲ್ಪ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.

ಅರಬ್ಬಿ ಸಮುದ್ರದ ಆಸ್ನಾ ಚಂಡಮಾರುತವು ದುರ್ಬಲಗೊಳ್ಳುತ್ತಿದ್ದು, ಇಂದು ರಾತ್ರಿ ಮಸ್ಕತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಈಗಾಗಲೇ ಆಂದ್ರಾ ಪ್ರವೇಶಿಸಿದ್ದು, ಆಂದ್ರಾ, ತೆಲಂಗಾಣ ಹಾಗೂ ಕರ್ನಾಟಕದ ಉತ್ತರ ಒಳನಾಡು ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ.

ಈಗಿನಂತೆ ಸೆಪ್ಟೆಂಬರ್ 2ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ರಾಜ್ಯದ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version