9:25 PM Thursday 30 - October 2025

ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಕೆ.ಎಸ್.ಆರ್.ಟಿ.ಸಿ. ಡಿಸಿ ಲೋಕಾಯುಕ್ತರ ಬಲೆಗೆ

basavaraj
06/02/2024

ಚಿಕ್ಕಮಗಳೂರು: ಡ್ರೈವರ್ ನಿಂದ ಲಂಚ ಪಡೆಯುತ್ತಿದ್ದ ವೇಳೆ ಕೆ.ಎಸ್.ಆರ್.ಟಿ.ಸಿ. ಡಿಸಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಬಸವರಾಜ್ ಲೋಕಾಯುಕ್ತ ಬಲೆಗೆ ಬಿದ್ದ ಕೆ.ಎಸ್.ಆರ್.ಟಿ.ಸಿ. ಡಿಸಿಯಾಗಿದ್ದಾನೆ.   ಈತ  ಚಿಕ್ಕಮಗಳೂರಿನಿಂದ ಕಡೂರು  ಡಿಪೋಗೆ ವರ್ಗಾವಣೆ ಮಾಡಲು  10 ಸಾವಿರ ರೂಪಾಯಿ  ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಡ್ರೈವರ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.

ಕಚೇರಿಯಲ್ಲಿ ಡ್ರೈವರ್ ನಿಂದ ಅಧಿಕಾರಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ  ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ.

ಸದ್ಯ ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಗಳು  ಬಸವರಾಜ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version