White Collar Terror Module Case: ಧರ್ಮ ಬೋಧಕ ಜಮ್ಮು ಪೊಲೀಸ್ ವಶಕ್ಕೆ
ಶ್ರೀನಗರ: ವೈಟ್ ಕಾಲರ್ ಭಯೋತ್ಪಾದಕ ಜಾಲ ಪ್ರಕರಣದಲ್ಲಿ ಹರ್ಯಾಣ ಮೂಲದ ಧರ್ಮ ಬೋಧಕನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫರೀದಾಬಾದ್ ವಿಶ್ವವಿದ್ಯಾಲಯದಿಂದ ಕಾರ್ಯನಿರ್ವಹಿಸುತ್ತಿರುವ ವೈಟ್ ಕಾಲರ್ ಭಯೋತ್ಪಾದಕ ಜಾಲದ ಕುರಿತು ತನಿಖೆ ತೀವ್ರಗೊಳಿಸಲಾಗಿದ್ದು, ಹರಿಯಾಣದ ಮೆವಾತ್ ಮೂಲದ ಧರ್ಮ ಬೋಧಕ ಮೌಲ್ವಿ ಇಯಾಕ್ ನನ್ನು ವಶಕ್ಕೆ ಪಡೆಯಲಾಗಿದೆ.
ಆತ ಫರೀದಾಬಾದ್‌ನ ಅಲ್ ಫಲಾಹ್ ವಿಶ್ವವಿದ್ಯಾಲಯದ ಆವರಣದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದನು. ಆತನ ಮನೆಯಿಂದಲೇ ಪೊಲೀಸರು 2,500 ಕೆ.ಜಿಗೂ ಹೆಚ್ಚು ಅಮೋನಿಯಂ ನೈಟ್ರೇಟ್, ಪೊಟ್ಯಾಷಿಯಂ ಕ್ಲೋರೆಟ್ ಮತ್ತು ಸಲ್ಪ ವಶಪಡಿಸಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಮೌಲ್ವಿ ಇಯಾಕ್ ನನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಬಂಧನಕ್ಕೊಳಗಾಗಲಿರುವ ಒಂಬತ್ತನೇ ಆರೋಪಿ ಎನಿಸಲಿದೆ.
ನವದೆಹಲಿಯ ಕೆಂಪು ಕೋಟೆಯಲ್ಲಿ ಸೋಮವಾರ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಈ ಸ್ಫೋಟದಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾದ ವೈದ್ಯ ಡಾ. ಉಮರ್ ನಬಿ (34) ಎಂಬಾತ ಪ್ರಮುಖ ಶಂಕಿತ ಆರೋಪಿಯಾಗಿದ್ದಾನೆ. ಆತ ಫರೀದಾಬಾದ್‌ನಲ್ಲಿ ಪತ್ತೆಯಾದ ಭಯೋತ್ಪಾದಕರ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























