ಭಾರತೀಯರೇನು ಹಂದಿಗಳೇ ? ಎಂದು ಪ್ರಶ್ನಿಸಿದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ - Mahanayaka

ಭಾರತೀಯರೇನು ಹಂದಿಗಳೇ ? ಎಂದು ಪ್ರಶ್ನಿಸಿದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

03/01/2021

ದೆಹಲಿ: ಆಸ್ಟ್ರಾಜೆನಿಕಾ ಲಸಿಕೆಯನ್ನು ಕೊರೊನಾ ವಿರುದ್ಧ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು,  WHO ಅನುಮತಿ ನೀಡದೇ ಇರುವ  ಲಸಿಕೆಯನ್ನು ಬಳಸಲು ಅಥವಾ ಪ್ರಯೋಗಿಸಲು  ಭಾರತೀಯರೇನು ಹಂದಿಗಳೇ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ.  ಕೇಂದ್ರ ಸರ್ಕಾರವು  WHO ಅನುಮತಿ ನೀಡದ ಲಸಿಕೆಯನ್ನು ಭಾರತೀಯರ ಮೇಲೆ ಪ್ರಯೋಗಿಸಲು ಮುಂದಾಗಿದೆ. ಈ ರೀತಿಯಾಗಿ ಭಾರತೀಯರ ಮೇಲೆ ಲಸಿಕೆ ಪ್ರಯೋಗಿಸಲು ಅವರೇನು ಹಂದಿಗಳೇ ಎಂದು ಮಾರ್ಮಿಕವಾಗಿ ಕೇಂದ್ರ ಸರ್ಕಾರವನ್ನು ಅವರು ಪ್ರಶ್ನಿಸಿದ್ದಾರೆ.

ಸುಬ್ರಮಣಿಯನ್ ಸ್ವಾಮಿ ಅವರು, ಆಡಳಿತ ಪಕ್ಷದಲ್ಲಿದ್ದರೂ  ಕೆಲವು ವಿಚಾರದಲ್ಲಿ ಬಿಜೆಪಿಯ  ವಿಚಾರಗಳಲ್ಲಿ ಅವರು ರಾಜಿ ಮಾಡಿಕೊಳ್ಳುವುದಿಲ್ಲ. ಈ ಹಿಂದೆಯೂ ಸ್ವಪಕ್ಷೀಯರ ವಿರುದ್ಧವೇ ಅವರು ಹೇಳಿಕೆ ನೀಡಿದ್ದರು. ಇದೀಗ ಕೊವಿಡ್ ಲಸಿಕೆಯ ಬಗ್ಗೆ ಅವರು ಹೇಳಿಕೆ ನೀಡಿದ್ದಾರೆ.

 

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ