8:29 PM Wednesday 15 - October 2025

ಯಾರಾಗಲಿದ್ದಾರೆ ಮುಂದಿನ ಸಿಎಂ? | ಅಮಿತ್ ಶಾ ಆತ್ಮೀಯರಾಗಿರುವ ಇವರಿಗೇ ಪಟ್ಟ ಕಟ್ಟುತ್ತಾರಾ?

amit shah
26/07/2021

ಬೆಂಗಳೂರು: ಸಿಎಂ ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆಯಲ್ಲಿ ಹೊಸ ಸಿಎಂ ಆಯ್ಕೆಗೆ  ಸಂಸತ್ ಭವನದಲ್ಲಿ ಗೃಹ ಸಚಿವ ಅಮಿತ್ ಶಾ ಬಿಜೆಪಿ ರಾಜ್ಯ ಉಸ್ತುವಾರಿ ಜೆ.ಪಿ.ನಡ್ಡಾ ಅವರ ಜೊತೆಗೆ ಚರ್ಚೆ ನಡೆಸುತ್ತಿದ್ದು, ಹೊಸ ಸಿಎಂ ಯಾರಾಗಲಿದ್ದಾರೆ ಎನ್ನುವ ಕುತೂಹಲ ಇದೀಗ ಮೂಡಿದೆ.

ರಾಜ್ಯದಲ್ಲಿ ಹೊಸ ಮುಖಕ್ಕೆ ಅವಕಾಶ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರ, ಗೋವಾ ಮಾದರಿಯಲ್ಲಿ ರಾಜ್ಯದಲ್ಲಿ ಕೂಡ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ನಿರ್ಗಮಿತ ಸಿಎಂ ಯಡಿಯೂರಪ್ಪನವರು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಲು ಒಲವು ತೋರಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ, ಹೈಕಮಾಂಡ್ ಲೆಕ್ಕಚಾರವೇ ಬೇರೆಯೇ ಇದೆ ಎಂದು ಹೇಳಲಾಗಿದೆ.

ಸದ್ಯದ ಮಾಹಿತಿಗಳ ಪ್ರಕಾರ ಮುರುಗೇಶ್ ನಿರಾನಿ ಅವರ ಹೆಸರು ಹೆಚ್ಚಾಗಿ ಕೇಳಿ ಬಂದಿದೆ. ಇದಕ್ಕೆ ಮುಖ್ಯ ಕಾರಣ ವೇನೆಂದರೆ, ಮುರುಗೇಶ್ ನಿರಾನಿ ಜೊತೆಗೆ ಗೃಹ ಸಚಿವ ಅಮಿತ್ ಶಾ ಅವರು ತುಂಬಾ ಆತ್ಮೀಯರಾಗಿದ್ದಾರೆ. ಜೊತೆಗೆ ಇವರ ನಡುವೆ ವ್ಯಾಪಾರ ಸಂಬಂಧಗಳು ಕೂಡ ಇವೆ ಎನ್ನಲಾಗುತ್ತಿದೆ. ಹೀಗಾಗಿ ಮುರುಗೇಶ್ ನಿರಾನಿಗೆ ಅದೃಷ್ಟ ಒಲಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಲಿಂಗಾಯಿತ ಸಮುದಾಯದಿಂದಲೇ ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗಲಿದೆ ಎನ್ನುವ ವಿಚಾರಕ್ಕೆ ಹೆಚ್ಚಿನ ಫೋಕಸ್ ನೀಡಲಾಗುತ್ತಿದೆ.

ಇನ್ನೊಂದೆಡೆ ದಕ್ಷಿಣ ಕನ್ನಡ ಮೂಲದ ನಳೀನ್ ಕುಮಾರ್ ಕಟೀಲ್ ಅವರು ಕೂಡ ಸಿಎಂ ಪಟ್ಟಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ಅವರು ಕೂಡ ದೆಹಲಿಗೆ ಪ್ರಯಾಣಿಸಿದ್ದಾರೆ ಎನ್ನುವ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬಂದಿದೆ.

ಇನ್ನಷ್ಟು ಸುದ್ದಿಗಳು…

ರಾಜ್ಯ ಬಿಟ್ಟು ಎಲ್ಲಿಯೂ ಹೋಗಲ್ಲ ಎಂದ ಯಡಿಯೂರಪ್ಪ | ಸಿಎಂ ಸ್ಥಾನಕ್ಕೆ ರಾಜೀನಾಮೆಯ ಬಳಿಕ ಮುಂದಿನ ಆಯ್ಕೆ ಏನು?

ಕಟು ವಾಕ್ಯಗಳಿಂದ ಯಡಿಯೂರಪ್ಪ ರಾಜೀನಾಮೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ!

ಆತ್ಮಹತ್ಯೆಯ ಕೊನೆಯ ಕ್ಷಣದಲ್ಲಿ ಯುವತಿಯನ್ನು ರಕ್ಷಿಸಿದ ಪೊಲೀಸ್ | ವಿಡಿಯೋ ವೈರಲ್

ಮತದಾರರ ಗುರುತಿನ ಚೀಟಿ ಕಳೆದು ಹೋದರೆ ಏನು ಮಾಡಬೇಕು?

ಆತ್ಮಹತ್ಯೆಯ ಕೊನೆಯ ಕ್ಷಣದಲ್ಲಿ ಯುವತಿಯನ್ನು ರಕ್ಷಿಸಿದ ಪೊಲೀಸ್ | ವಿಡಿಯೋ ವೈರಲ್

 

ಇತ್ತೀಚಿನ ಸುದ್ದಿ

Exit mobile version