ಕದನ ವಿರಾಮ ಘೋಷಿಸಲು ಟ್ರಂಪ್ ಯಾರು?: ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕಲಬುರಗಿ: ಕೇಂದ್ರ ಸರ್ಕಾರದ ಕದನ ವಿರಾಮ ನಿರ್ಧಾರದಿಂದ ಸೇನೆಗೆ ಹಾಗೂ ಭಾರತೀಯ ನಾಗರಿಕರಿಗೆ ನಿರಾಸೆಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಾಗರಿಕರ ಮೇಲೆ ದಾಳಿ ಮಾಡಿದ ಭಯೋತ್ಪಾದಕರ ನೆಲೆಗಳನ್ನು ಸೈನಿಕರು ನಾಶ ಮಾಡಿದ್ದಾರೆ. ಆದರೆ ಕದನ ವಿರಾಮ ಘೋಷಿಸಿರುವುದು ಯಾವ ಮಾನದಂಡದಲ್ಲಿ ಎಂದು ಅವರು ಪ್ರಶ್ನಿಸಿದರು.
ಕಾಶ್ಮೀರ ವಿಚಾರ ದ್ವಿಪಕ್ಷೀಯ ವಿಷಯವಾಗಿದೆ. ಪಾಕಿಸ್ತಾನ ಹಾಗೂ ಭಾರತ ನಡುವಿನ ವಿಚಾರವನ್ನು ಅಮೆರಿಕ ಮಧ್ಯ ಪ್ರವೇಶಿಸುವ ಮೂಲಕ ಅಂತಾರಾಷ್ಟ್ರೀಯ ವಿಷಯವನ್ನಾಗಿ ಮಾಡಲಾಗಿದೆ. ಕದನ ವಿರಾಮ ಘೋಷಣೆ ಮಾಡಲು ಟ್ರಂಪ್ ಯಾರು? ಎಂದು ಅವರು ಪ್ರಶ್ನಿಸಿದರು.
ಟ್ರಂಪ್ ಟ್ವೀಟ್ ನಲ್ಲಿರುವ ಅಂಶ ಗಮನಿಸಿದ್ದೀರಾ? ಕಾಮನ್ಸ್ ಸೆನ್ಸ್ ಎನ್ನುವ ಪದ ಬಳಸಿ ಭಾರತಕ್ಕೆ ಬುದ್ಧಿ ಹೇಳಿರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ, ವಿದೇಶಾಂಗ ಸಚಿವರು ಹಾಗೂ ರಾಷ್ಟ್ರೀಯ ಭದ್ರತೆ ಸಲಹೆಗಾರರು ಕದನ ವಿರಾಮದ ಬಗ್ಗೆ ಜನರಿಗೆ ಯಾಕೆ ವಾಸ್ತವ ತಿಳಿಸುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD