ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಚಾಕುವಿನಿಂದ ಚುಚ್ಚಿ ಬರ್ಬರ ಹತ್ಯೆ!

keerthi
28/05/2025

ಚಿಕ್ಕಮಗಳೂರು:  ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನ  ಮನಸೋ ಇಚ್ಛೆ ಚಾಕುವಿನಿಂದ ಚುಚ್ಚಿ ಪತಿಯೇ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.

ಕೀರ್ತಿ (26) ಮೃತಪಟ್ಟ ಯುವತಿಯಾಗಿದ್ದು,  ಪತಿ ಅವಿನಾಶ್ (32) ಪತ್ನಿಯನ್ನೇ ಕೊಂದ ಪತಿಯಾಗಿದ್ದಾನೆ. ಕಳೆದ  4 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಅವಿನಾಶ್—ಕೀರ್ತೀ ನಡುವೆ ಇತ್ತೀಚೆಗೆ ಜಗಳ ಆರಂಭವಾಗಿತ್ತು.

ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನ 10 ಬಾರಿ ಚಾಕುವಿನಿಂದ ಇರಿದು ಕೊಲೆಗೈದ ಬಳಿಕ ಪತಿ ಅವಿನಾಶ್  ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಜರುಗಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version