ರಮಣ್ ಸಿಂಗ್ ಅವರನ್ನು ಬಿಜೆಪಿ 5 ವರ್ಷಗಳ ಕಾಲ ಯಾಕೆ ಕಡೆಗಣಿಸಿತು..? ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್ ಏನ್ ಉತ್ತರ ಕೊಟ್ರು ಗೊತ್ತಾ..?

ಛತ್ತೀಸ್ ಗಢದಲ್ಲಿ ನಿರ್ಣಾಯಕ ವಿಧಾನಸಭಾ ಚುನಾವಣೆ ನಡೆಯುವ ಮುಂಚಿತವಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು ತೀವ್ರಗೊಂಡಿವೆ. ರಾಜ್ಯದಲ್ಲಿ ಸತತ ಎರಡನೇ ಅವಧಿಗೆ ಸ್ಪರ್ಧಿಸುತ್ತಿರುವ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು.
ಮಾಜಿ ಸಿಎಂ ರಮಣ್ ಸಿಂಗ್ ಅವರನ್ನು ಐದು ವರ್ಷಗಳ ಕಾಲ ಬಿಜೆಪಿ ಏಕೆ ನಿರ್ಲಕ್ಷ್ಯ ಮಾಡಿತು ಎಂಬ ಪ್ರಶ್ನೆಗೆ ಉತ್ತರಿಸಿದ ಬಘೇಲ್, ಗೃಹ ಸಚಿವ ಅಮಿತ್ ಶಾ ಹಲವಾರು ರಾತ್ರಿಗಳ ಕಾಲ ರಾಜ್ಯದಲ್ಲಿದ್ದರೂ ಸಿಂಗ್ ಇನ್ನೂ ಕೇಸರಿ ಪಕ್ಷದೊಳಗೆ ಬಲವಾದ ಹಿಡಿತವನ್ನು ಹೊಂದಿದ್ದಾರೆ. ಟಿಕೆಟ್ ವಿತರಣೆಯಲ್ಲಿ ಹೆಚ್ಚಿನ ಅಭಿಪ್ರಾಯವನ್ನು ಹೊಂದಿದ್ದಾರೆ ಎಂದು ಹೇಳಿದರು.
ರೈತರಿಗೆ ಮತ್ತೊಂದು ಸಾಲ ಮನ್ನಾದ ಅಗತ್ಯತೆಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಬಘೇಲ್, ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಭರವಸೆ ನೀಡಲಾಗಿದೆ ಎಂದು ಹೇಳಿದರು. ಅಬಕಾರಿ ಆದಾಯದಲ್ಲಿ ಭ್ರಷ್ಟಾಚಾರದ ಪ್ರಶ್ನೆಗೆ ಉತ್ತರಿಸಿದ ಬಾಘೇಲ್, ರಮಣ್ ಸಿಂಗ್ ಸರ್ಕಾರಕ್ಕೆ ಹೋಲಿಸಿದರೆ ಕಾಂಗ್ರೆಸ್ ಆಡಳಿತದಲ್ಲಿ ಆದಾಯವು ಬಹುತೇಕ ದ್ವಿಗುಣಗೊಂಡಿದೆ ಎಂದು ಹೇಳಿದರು.