10:59 AM Thursday 21 - August 2025

ಗಣಿ ಅಧಿಕಾರಿ ಪ್ರತಿಮಾ ಅವರನ್ನು ಕೊಂದಿದ್ದೇಕೆ?: ಬಾಯ್ಬಿಟ್ಟ ಆರೋಪಿ ಮಾಜಿ ಕಾರು ಡ್ರೈವರ್!

kiran
06/11/2023

ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಪರಾರಿ ಆಗಿದ್ದ. ಈಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು,  ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದು, ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ.

4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದನು.  ಗುತ್ತಿಗೆ ಆಧಾರದ ಮೇಲೆ ಚಾಲಕ ವೃತ್ತಿ ಮಾಡುತ್ತಿರುವ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲಿಯೇ ಕಾರು ಬಿಟ್ಟು ತೆರಳಿದ್ದನು.

ಪ್ರತಿಮಾ ರೈಡ್ ಹೋಗುವ ವಿಚಾರ ಲೀಕ್ ಮಾಡುತ್ತಿರುವ ಬಗ್ಗೆ ಮಾಹಿತಿ ಇತ್ತು. ಈ ಕಾರಣಕ್ಕೆ ಪ್ರತಿಮಾ ವಾರ್ನ್ ಕೂಡ ಮಾಡಿದ್ದರು. ಈ ವೇಳೆ ಬೈದಾಗ ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿದ್ದನಂತೆ.ಆದರೆ ಆಕೆ ಅದನ್ನು ತಿರಸ್ಕರಿಸಿದರು ಶನಿವಾರ ಮನೆ ಬಳಿಯೇ ಕಾದು ಕುಳಿತು ಹೊಂಚು ಹಾಕಿ ಕೊಲೆ ಮಾಡಿ ಕಿರಣ್ ಎಸ್ಕೇಪ್ ಆಗಿದ್ದರು. ಇದೀಗ ಆತನನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

Exit mobile version