ಮುಸುಕುಧಾರಿ ದೂರುಕೊಟ್ಟ ದಿನ ಬಿಜೆಪಿಯವರು ಯಾಕೆ ಮಾತನಾಡಲಿಲ್ಲ?: ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಂಗಳೂರು: ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದು, ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ ಎಂದಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಬಿಜೆಪಿಯವರ ನಿಯೋಗ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯವರು ಆರಂಭದಲ್ಲಿ ಏನೂ ಮಾತನಾಡಿರಲಿಲ್ಲ. ಈಗ ರಾಜಕಾರಣ ಮಾಡುತ್ತಿದ್ದಾರೆ. ಅವರು ಹಿಂದುತ್ವವನ್ನು ಅವರ ಮನೆ ಆಸ್ತಿ ಎಂದು ಭಾವಿಸಿದ್ದಾರೆ. ಇದು ಯಾರೊಬ್ಬರ ಆಸ್ತಿಯಲ್ಲ. ಅವರವರ ಭಕ್ತಿ, ನಂಬಿಕೆ ಭಾವನೆಗೆ ಸಂಬಂಧಿಸಿದ್ದು. ಬಿಜೆಪಿಯವರದ್ದು ರಾಜಕಾರಣ ಬಿಟ್ಟರೆ ಬೇರೇನೂ ಇಲ್ಲ ಎಂದು ಟೀಕಿಸಿದರು.
ಮುಸುಕುಧಾರಿ ದೂರು ಕೊಟ್ಟ ದಿನ ಬಿಜೆಪಿಯವರು ಯಾಕೆ ಮಾತನಾಡಲಿಲ್ಲ? ಆತನ ದೂರು ಸರಿಯಿಲ್ಲ ಎಂದು ಯಾಕೆ ಹೇಳಲಿಲ್ಲ? ಎಸ್ ಐಟಿ ರಚಿಸಿದ ಮೊದಲ ದಿನ ಯಾಕೆ ಮಾತನಾಡಲಿಲ್ಲ ನಮಗೆ ರಾಜಕೀಯಕ್ಕೆ ಧರ್ಮಸ್ಥಳ ಬೇಡ. ಧರ್ಮಸ್ಥಳದ ಗೌರವ ಕಾಪಾಡುವುದು ನಮ್ಮ ಚಿಂತನೆ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಆಗಲಿ ಎನ್ನುವವರು ನಾವು. ನ್ಯಾಯಾಲಯದ ಮುಂದೆ ದೂರು ನೀಡಿದ ನಂತರವೂ ಸರ್ಕಾರ ತನಿಖೆ ಮಾಡದಿದ್ದರೇ ಬಿಜೆಪಿಯವರು ಏನು ಹೇಳುತ್ತಿದ್ದರು? ಅವರೇ ಟೀಕೆ ಮಾಡುತ್ತಿರಲಿಲ್ಲವೇ? ಈಗ ಈ ರೀತಿ ರಾಜಕಾರಣ ಮಾಡುತ್ತಿದ್ದು, ನಾವು ಇದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD