ಮುಸ್ಲಿಮರೇ ಅಧಿಕ ಸಂಖ್ಯೆಯಲ್ಲಿದ್ದಾರೆಂದರೆ ಅಲ್ಪಸಂಖ್ಯಾತ ಸ್ಥಾನಮಾನ ಏಕೆ ಬೇಕು?: ಆರ್.ಅಶೋಕ್ - Mahanayaka
3:56 PM Wednesday 20 - August 2025

ಮುಸ್ಲಿಮರೇ ಅಧಿಕ ಸಂಖ್ಯೆಯಲ್ಲಿದ್ದಾರೆಂದರೆ ಅಲ್ಪಸಂಖ್ಯಾತ ಸ್ಥಾನಮಾನ ಏಕೆ ಬೇಕು?: ಆರ್.ಅಶೋಕ್

r ashoka
15/04/2025


Provided by

ಬೆಂಗಳೂರು: ಜಾತಿ ಗಣತಿ ವರದಿಯನ್ವಯ ರಾಜ್ಯದಲ್ಲಿ ಮುಸ್ಲಿಮರೇ ಅಧಿಕ ಸಂಖ್ಯೆಯಲ್ಲಿದ್ದಾರೆ ಎಂದಮೇಲೆ ಅವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಏಕೆ ಬೇಕು? ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.

ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಾತಿ ಗಣತಿ ವರದಿಯಲ್ಲಿರುವ ಜನಸಂಖ್ಯೆ ಅಂಕಿ–ಅಂಶಗಳು ನಿಜವೇ ಆದರೆ, ರಾಜ್ಯದಲ್ಲಿ ಮುಸ್ಲಿಮರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಹೀಗಿದ್ದಾಗ ಅವರಿಗೇಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಎಂಬುದು ಅರ್ಥವಾಗುತ್ತಿಲ್ಲ ಎಂದರು.

ಈ ಕೂಡಲೇ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿರುವ ಅಲ್ಪಸಂಖ್ಯಾತ ಸ್ಥಾನಮಾನ ಹಿಂಪಡೆಯಬೇಕು ಎಂದು ಆರ್. ಅಶೋಕ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಜಾತಿಗಣತಿ ವರದಿ ಪ್ರಕಾರ ಮುಸಲ್ಮಾನರು ಅತಿ ಹೆಚ್ಚು ಸಂಖ್ಯೆಯಲ್ಲಿ ಇದ್ದಾರೆ ಎಂದರೆ ಅವರಿಗೆ ಅಲ್ಪಸಂಖ್ಯಾತರು ಎನ್ನುವುದೇಕೆ? ಜಾತಿಗಣತಿ ವರದಿ ಎನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚುನಾವಣೆಯ ಗಿಮಿಕ್ ಅಷ್ಟೇ. ಮುಂದಿನ ಸಚಿವ ಸಂಪುಟದಲ್ಲಿ ಉಪಸಮಿತಿ ರಚಿಸಿ ಕೈ ತೊಳೆದುಕೊಳ್ಳುತ್ತಾರೆ ಎಂದು ಆರ್. ಅಶೋಕ್ ಇದೇ ವೇಳೆ ಅಭಿಪ್ರಾಯಪಟ್ಟರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ