ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಮಾಡಿದ್ದೇಕೆ? : ಬಾಯ್ಬಿಟ್ಟ ಆರೋಪಿ

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಮಾಡಿರುವ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಮಾನಿ ನವೀನ್(24) ಬಂಧಿತ ಆರೋಪಿಯಾಗಿದ್ದು, ನಟಿಯ ಫೇಕ್ ವಿಡಿಯೋವನ್ನು ವೈರಲ್ ಮಾಡಿದ್ದೇಕೆ ಎನ್ನುವುದನ್ನು ಪೊಲೀಸರ ವಿಚಾರಣೆ ವೇಳೆ ಈತ ಬಾಯ್ಬಿಟ್ಟಿದ್ದಾನೆ.
ಆರೋಪಿಯು ರಶ್ಮಿಕಾ ಮಂದಣ್ಣ ಹೆಸರಿನಲ್ಲಿ ಫ್ಯಾನ್ಸ್ ಪೇಜ್ ಕ್ರಿಯೇಟ್ ಮಾಡಿದ್ದು, ಈತ ಅದರ ಅಡ್ಮೀನ್ ಆಗಿದ್ದ. ಇದೇ ರೀತಿಯಲ್ಲಿ ಇನ್ನಿಬ್ಬರು ಸೆಲೆಬ್ರೆಟಿಗಳ ಫ್ಯಾನ್ಸ್ ಪೇಜ್ ಕ್ರಿಯೇಟ್ ಮಾಡಿದ್ದನಂತೆ. ಇನ್ ಸ್ಟಾಗ್ರಾಮ್ ನಲ್ಲಿ ಫಾಲೋವರ್ಸ್ ಹೆಚ್ಚಿಸಿಕೊಳ್ಳಲು ಡೀಪ್ ಫೇಕ್ ವಿಡಿಯೋವನ್ನು ಸೃಷ್ಟಿ ಮಾಡಿದ್ದನಂತೆ.
ಆರೋಪಿ ಇಮಾನಿ ನವೀನ್ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ನಿವಾಸಿಯಾಗಿದ್ದಾನೆ. ಸದ್ಯ ಆರೋಪಿಯ ಬಳಿಯಿದ್ದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಡೀಪ್ ಫೇಕ್ ವಿಡಿಯೋ ಪ್ರಕರಣವನ್ನು ಬೆನ್ನತ್ತಿದ ಪೊಲೀಸರು, ಮೊದಲು ಸೋಷಿಯಲ್ ಮೀಡಿಯಾಗೆ ಈ ವಿಡಿಯೋವನ್ನು ಅಪ್ ಲೋಡ್ ಮಾಡಿದವರು ಯಾರು ಎನ್ನುವ ಮಾಹಿತಿಯನ್ನು ಸಂಗ್ರಹಿಸಿದ್ದರು. ಈ ವೇಳೆ ಇಮಾನ್ ನವೀನ್ ಸಿಕ್ಕಿ ಬಿದ್ದಿದ್ದಾನೆ.