ನೂರಾರು ಮಹಿಳೆಯರ ಜೀವನ ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನ?: ಮೋದಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ - Mahanayaka

ನೂರಾರು ಮಹಿಳೆಯರ ಜೀವನ ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನ?: ಮೋದಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

prajwal revanna
29/04/2024


Provided by

ನವದೆಹಲಿ:  ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ವಿಚಾರ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಜೊತೆಗೆ ವಿಡಿಯೋದಲ್ಲಿರುವ ಮಹಿಳೆಯರ ಜೀವನಕ್ಕೂ ಮುಳ್ಳಾಗಿದೆ. ಈ ನಡುವೆ ಘಟನೆ ಸಂಬಂಧ ಎನ್ ಡಿಎ ಮೈತ್ರಿ ಕೂಟ ಹಾಗೂ ಪ್ರಧಾನಿ ಮೋದಿಗೆ ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣ ಸಂಬಂಧ ಪ್ರಿಯಾಂಕಾ ಗಾಂಧಿ ಪ್ರಶ್ನೆ ಮಾಡಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ  ಪ್ರತಿಕ್ರಿಯಿಸಿರುವ ಪ್ರಿಯಾಂಕಾ, ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿರುವ ನಾಯಕನ ಬಗ್ಗೆ ನೀವು ಏಕೆ ಮೌನವಾಗಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಧಾನಿ ಮೋದಿ ಭುಜದ ಮೇಲೆ ಕೈಯಿಟ್ಟು ಫೋಟೋ ತೆಗೆಸಿಕೊಂಡ ನಾಯಕ, 10 ದಿನಗಳ ಹಿಂದೆ ಪ್ರಧಾನಿಯೇ ಈ ನಾಯಕನ ಪರವಾಗಿ ಪ್ರಚಾರ ಮಾಡಿದ್ದಾರೆ. ವೇದಿಕೆಯಲ್ಲಿ ಹಾಡಿ ಹೊಗಳಿದ್ದಾರೆ. ಇದೀಗ  ಆ ನಾಯಕ ದೇಶದಿಂದ ತಲೆಮರೆಸಿಕೊಂಡಿದ್ದಾನೆ. ಅವನು ಮಾಡಿರುವ ಘೋರ ಕೃತ್ಯಗಳು ಹೃದಯ ವಿದ್ರಾವಕವಾಗಿವೆ. ನೂರಾರು ಮಹಿಳೆಯರ ಜೀವನನ್ನು ಹಾಳು ಮಾಡಿದ್ದಾರೆ. ಮೋದಿಜಿ ಇನ್ನೂ ಸುಮ್ಮನಿರುತ್ತೀರಾ? ಎಂದು ಅವರು ಟ್ವೀಟ್ ಮಾಡಿದ್ದಾರೆ.

ಸಂಸದ ಪ್ರಜ್ವಲ್‌ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ವಿರುದ್ಧವೂ ದೌರ್ಜನ್ಯ ಆರೋಪ ಕೇಳಿಬಂದಿದೆ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್‌ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ