ಪತಿ ಲೈಂಗಿಕ ಸಂಪರ್ಕ ನಡೆಸುತ್ತಿಲ್ಲ: ಪತಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಬಿಹಾರ: ಮದುವೆಯಾಗಿ ಎರಡು ವರ್ಷಗಳಾದರೂ ಪತಿ ತನ್ನೊಂದಿಗೆ ಲೈಂಗಿಕ ಸಂಪರ್ಕ ನಡೆಸಿಲ್ಲ ಎಂದು ಮಹಿಳೆಯೊಬ್ಬರು ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಘಟನೆ ಬಿಹಾರದ ಮುಜಾಫರ್ ನಗರದಲ್ಲಿ ನಡೆದಿದೆ.
2021ರ ಮೇಯಲ್ಲಿ ನನಗೆ ಮದುವೆಯಾಘಿತ್ತು. ಮದುವೆಯಾದ ನಂತರ ಪತಿ ನನ್ನೊಂದಿಗೆ ಲೈಂಗಿಕ ಸಂಬಂಧ ನಡೆಸಿಲ್ಲ, ಈ ಬಗ್ಗೆ ಅತ್ತೆಗೆ ವಿಚಾರ ಹೇಳಿದರೂ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ, ಪತಿಯೊಂದಿಗೆ ನೇರವಾಗಿ ಮಾತನಾಡಲು ಮುಂದರೆ, ಆತ ನನಗೆ ಹಲ್ಲೆ ನಡೆಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಇದೀಗ ಮಹಿಳೆಯ ಹೇಳಿಕೆಯ ಆಧಾರದಲ್ಲಿ ಮಹಿಳೆಯ ಪತಿಯ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಒಂದೆಡೆ ಪತಿ ಲೈಂಗಿಕ ಸಂಬಂಧ ಮುಂದುವರಿಸುತ್ತಿಲ್ಲ, ಅತ್ತ ವಿಚ್ಛೇದನ ಪಡೆದುಕೊಳ್ಳಲು ಸಮ್ಮತಿಸುತ್ತಿಲ್ಲ, ತವರು ಮನೆಗೆ ಹೋದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth