ಬಾವಿಗೆ ಹಾರಿದ ಪತಿಯನ್ನು ರಕ್ಷಿಸಲು ಹೋದ ಪತ್ನಿಯೂ ಸಾವು: ಮಕ್ಕಳು ಅನಾಥ

ಕಾರ್ಕಳ: ಕ್ಷುಲ್ಲಕ ವಿಚಾರಕ್ಕೆ ಆರಂಭಗೊಂಡ ದಂಪತಿ ಜಗಳ ಸಾವಿನೊಂದಿಗೆ ಅಂತ್ಯ ಕಂಡಿರುವ ಘಟನೆ ಇಂದು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿ ನಡೆದಿದೆ.
ಮೃತರನ್ನು ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ದಿ (40) ಹಾಗೂ ಅವರ ಪತ್ನಿ ಯಶೋಧಾ (32) ಎಂದು ಗುರುತಿಸಲಾಗಿದೆ.
ರವಿವಾರ ಬೆಳಗ್ಗೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದರು. ಯಶೋಧಾರನ್ನು ರಕ್ಷಿಸಲು ನೀರಿಗೆ ಹಾರಿದ ಪತಿ ಇಮ್ಯಾನುಲ್ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟರು.
ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್, ಯಶೋಧಾ ದಂಪತಿ ನಲ್ಲೂರಿನ ತೋಟವೊಂದರಲ್ಲಿ ಕೆಲಸಕ್ಕಿದ್ದರು. ದಂಪತಿ ಸಾವಿನಿಂದ ಇದೀಗ 10 ವರ್ಷದ ಬಾಲಕ ಹಾಗೂ 9 ವರ್ಷದ ಬಾಲಕಿ ಅನಾಥರಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw