ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡುಕೋಣ ದಾಳಿ: ಇಬ್ಬರ ಸ್ಥಿತಿ ಗಂಭೀರ - Mahanayaka

ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡುಕೋಣ ದಾಳಿ: ಇಬ್ಬರ ಸ್ಥಿತಿ ಗಂಭೀರ

chikkamagaluru news
09/11/2024

ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಕಾಡುಕೋಣವೊಂದು ಏಕಾಏಕಿ ದಾಳಿ ನಡೆಸಿ ಇಬ್ಬರನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬಾಳೆಹೊನ್ನೂರು ಸಮೀಪದ ಖಾಂಡ್ಯದ ಬಿದರೆಯಲ್ಲಿ ನಡೆದಿದೆ.

ರಾಜು ಹಾಗೂ ಅಸ್ಸಾಂ ಮೂಲದ ವ್ಯಕ್ತಿಗೆ ಗಾಯಗೊಂಡವರಾಗಿದ್ದಾರೆ. ಸದ್ಯ ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮುತ್ತೋಡಿ ಅಭಯಾರಣ್ಯದ ಅಂಚಿನಲ್ಲಿರೋ ಬಿದರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡುಕೋಣ ಕಾರ್ಮಿಕರ ಮೇಲೆ ಎರಗಿದೆ. ಈ ವೇಳೆ ಕಾರ್ಮಿಕರು ತೋಟದಿಂದ ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ ಇಬ್ಬರು ದಾಳಿಗೆ ಸಿಲುಕಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ