ಬೈಕ್ ಗೆ ಕಾಡಾನೆ ಡಿಕ್ಕಿ: ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಕಾಡಾನೆ ಭೀಕರ ದಾಳಿ

ಚಿಕ್ಕಮಗಳೂರು: ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಬಳಿ ನಡೆದಿದೆ.
ಕಾಫಿ ಎಸ್ಟೇಟ್ ನಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ಸುಬ್ರಮಣ್ಯ ಎಂಬವರು ಆನೆ ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಕಾಡಾನೆ ದಾಳಿಯಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾಫಿ ಎಸ್ಟೇಟಿಗೆ ಸುಬ್ರಮಣ್ಯ ತೆರಳುತ್ತಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಚಲಾಯಿಸುತ್ತಿದ್ದ ಸುಬ್ರಮಣ್ಯ ನೆಲಕ್ಕೆ ಬಿದ್ದಿದ್ದು, ಈ ವೇಳೆ ಸುಬ್ರಮಣ್ಯನ ಹೊಟ್ಟೆಗೆ ಕಾಡಾನೆ ಬಲವಾಗಿ ತಿವಿದಿದೆ.
ಸದ್ಯ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD