ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ರಸ್ತೆ ತಿರುವಿನಲ್ಲಿ ಭೋಜನಕ್ಕೆ ನಿಂತ ಕಾಡಾನೆ
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷಗೊಂಡು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಚಾರ್ಮಾಡಿ ಘಾಟಿಯ 2ನೇ–3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನೆ(Wild Elephant) ಕಾಣಿಸಿಕೊಂಡ ಘಟನೆ ನಡೆದಿದೆ.
ರಾತ್ರಿ ಸುಮಾರು 9:45ರ ವೇಳೆಗೆ ಮರವನ್ನು ಮುರಿದು ರಸ್ತೆ ಮಧ್ಯೆ ನಿಂತ ಕಾಡಾನೆ, ಒಂದು ತಾಸಿಗೂ ಅಧಿಕ ಕಾಲ ಅಲ್ಲೇ ಅಲೆಯುತ್ತಿತ್ತು. ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.
ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತು, ವಾಹನ ಸವಾರರು ಭಯಭೀತರಾಗಿದ್ದರು. ಘಟನಾ ಸ್ಥಳದಲ್ಲಿ ಮೊಬೈಲ್ ನೆಟ್ವರ್ಕ್ ಇಲ್ಲದ ಕಾರಣ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಸಾರ್ವಜನಿಕರು ಪರದಾಡಿದ ಸ್ಥಿತಿ ನಿರ್ಮಾಣವಾಗಿತ್ತು.
ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ಚಾರ್ಮಾಡಿ ಘಾಟಿಯಲ್ಲಿ ಈ ಘಟನೆ ನಡೆದಿರುವುದರಿಂದ, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























