ಅಂದು ಶೂಟಿಂಗ್ ಗೆ ತೆರಳಿದ್ದ ಜೈಲಿಗೆ ಶಿಫ್ಟ್ ಆಗ್ತಾರಾ ನಟ ದರ್ಶನ್!? - Mahanayaka

ಅಂದು ಶೂಟಿಂಗ್ ಗೆ ತೆರಳಿದ್ದ ಜೈಲಿಗೆ ಶಿಫ್ಟ್ ಆಗ್ತಾರಾ ನಟ ದರ್ಶನ್!?

darshan
28/08/2024

ಬೆಂಗಳೂರು: ಜೈಲಿನಲ್ಲಿ ಪೊಲೀಸ್ ಅಧಿಕಾರಿಗಳು ನಟ ದರ್ಶನ್ ಗೆ ರಾಜಾತಿಥ್ಯ ನೀಡಿರುವ ಬೆನ್ನಲ್ಲೇ ಇದೀಗ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದ್ದು, ಬಳ್ಳಾರಿ ಜೈಲಿಗೆ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗುತ್ತಿದೆ.

ಅಂದ ಹಾಗೆ ದರ್ಶನ್ ಬಳ್ಳಾರಿ ಜೈಲಿಗೆ ಹೋಗ್ತಿರೋದು ಇದು ಮೊದಲಲ್ಲ. ಈ ಹಿಂದೆ ಚೌಕ ಸಿನಿಮಾದ ಶೂಟಿಂಗ್ ಗೆ ದರ್ಶನ್ ಈ ಜೈಲಿಗೆ ತೆರಳಿದ್ದರು.  ಜೈಲಿನಲ್ಲಿರುವ ಖಾಲಿ ಸೆಲ್ ಗಳಲ್ಲಿ ಸಿನಿಮಾ ಚಿತ್ರೀಕರಣ ನಡೆದಿತ್ತು. ಆದ್ರೆ ಈ ಬಾರಿ ನಿಜವಾಗಿಯೂ ಖೈದಿಯಾಗಿಯೇ ಅವರು ಬಳ್ಳಾರಿ ಜೈಲು ಸೇರಿದ್ದಾರೆ.

ಇಂದು ನಟ ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಲಿದೆ. ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಇಂದು ಕೋರ್ಟ್ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ.

ನ್ಯಾಯಾಂಗ ಬಂಧನ ಆದೇಶದ ಬಳಿಕ ಮಧ್ಯಾಹ್ನ 1 ಗಂಟೆ ಬಳಿಕ ಬಿಗಿ ಭದ್ರತೆಯಲ್ಲಿ ಪೊಲೀಸರು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ ಎಂದು ಹೇಳಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ