ಮತ್ತೆ ಜೈಲು ಸೇರ್ತಾರಾ ನಟ ದರ್ಶನ್?: 7 ಆರೋಪಿಗಳಿಗೆ ನೋಟಿಸ್ ಜಾರಿ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನಲ್ಲಿ ಬಿಡುಗಡೆಯಾಗಿರುವ ನಟ ದರ್ಶನ್ ಆ್ಯಂಡ್ ಟೀಂಗೆ ಮತ್ತೆ ಟೆನ್ಷನ್ ಶುರುವಾಗಿದೆ. ಹೈಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ ಕೇಸ್ ಸುಪ್ರೀಂ ಕೋರ್ಟ್ ಅಂಗಳಕ್ಕೆ ಹೋಗಿದೆ. ಇದೀಗ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ 7 ಆರೋಪಿಗಳಿಗೂ ನೋಟಿಸ್ ಜಾರಿ ಮಾಡಿದೆ.
ಕಳೆದ ವರ್ಷ ಕರ್ನಾಟಕ ಹೈಕೋರ್ಟ್ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ 7 ಆರೋಪಿಗಳಿಗೆ ಜಾಮೀನು ನೀಡಿತ್ತು. ಈ ಸಂಬಂಧ ಸರ್ಕಾರದ ಒಪ್ಪಿಗೆ ಪಡೆದು ಪೊಲೀಸರು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದರು.
ಸದ್ಯ ಸರ್ಕಾರಿ ವಕೀಲರು ತಮ್ಮ ವಾದ ಮಂಡಿಸಿದ್ದಾರೆ, ಆರೋಪಿಗಳು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಹಾಗಾಗಿ ಜಾಮೀನು ರದ್ದುಗೊಳಿಸಿ ಅಂತ ಮನವಿ ಮಾಡಿದ್ದಾರೆ.
ದರ್ಶನ್ ಸೆಲೆಬ್ರೆಟಿಯಾಗಿದ್ದು, ದೊಡ್ಡಅಭಿಮಾನಿ ಬಳಗ ಹೊಂದಿದ್ದಾರೆ, ಹೀಗಾಗಿ ತನ್ನ ಪ್ರಭಾವ ಬಳಸಿ ಸಾಕ್ಷಿ ತಿರುಚುವ ಸಾಧ್ಯತೆ ಇದೆ ಎಂದು ಪೊಲೀಸರು ಆತಂಕ ಹೊರಹಾಕಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: