ಸಿಎಂ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ ಸನ್ನಿಹಿತ.? ರಿಸೈನ್ ಹಿಂದಿನ ಪಾಲಿಟಿಕ್ಸ್ ಏನು..?
ಅರವಿಂದ್ ಕೇಜ್ರಿವಾಲ್ ಮಂಗಳವಾರ ರಾಜೀನಾಮೆ ನೀಡುವುದು ಖಚಿತ ಎಂದು ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಪ್ರಾಮಾಣಿಕ ಎಎಪಿ ನಾಯಕನಿಗೆ ಭಾರತೀಯ ಜನತಾ ಪಕ್ಷ ಕಿರುಕುಳ ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಎರಡು ದಿನಗಳಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಭಾನುವಾರ ಘೋಷಿಸಿದ್ದರು.
ಕೇಜ್ರಿವಾಲ್ ಅವರೊಂದಿಗೆ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿಗೆ ಮುಂಬರುವ ಚುನಾವಣೆಯಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದು ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದರು.
“ಇತಿಹಾಸದಲ್ಲಿ ಮೊದಲ ಬಾರಿಗೆ, ಚುನಾಯಿತ ಮುಖ್ಯಮಂತ್ರಿಯೊಬ್ಬರು ನ್ಯಾಯಾಲಯದ ತೀರ್ಪಿನ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ ಮತ್ತು ಸಿಎಂ ಸ್ಥಾನವು ಅವರಿಗಾಗಿ ಕಾಯುತ್ತಿದೆ. ಆದರೂ, ಜನತಾ ನ್ಯಾಯಾಲಯದಿಂದ ತೀರ್ಪು ಬರುವವರೆಗೂ ಆ ಆಸನದಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಜನ ತಮ್ಮನ್ನು ಪ್ರಾಮಾಣಿಕನೆಂದು ನಿರ್ಧರಿಸಿದರೆ ಮಾತ್ರ ಸಿಎಂ ಹುದ್ದೆ ವಹಿಸಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಇದು ಬಹಳ ಮಹತ್ವದ ವಿಷಯವಾಗಿದೆ” ಎಂದು ಭಾರದ್ವಾಜ್ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth