ವರುಣ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರಾ?: ಯಡಿಯೂರಪ್ಪ ಹೇಳಿದ್ದೇನು?

yadiurappa
31/03/2023

ಬೆಂಗಳೂರು: ಕುತೂಹಲ ಕೆರಳಿಸಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಪುತ್ರ ವಿಜಯೇಂದ್ರ ಯಾವುದೇ ಕಾರಣಕ್ಕೂ ವರುಣಾದಿಂದ ವಿಜಯೇಂದ್ರ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಶಿಕಾರಿಪುರದಿಂದಲೇ ಸ್ಪರ್ಧಿಸುವಂತೆ ಸೂಚಿಸಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ವರುಣ ಕ್ಷೇತ್ರದಲ್ಲಿ ಬಿವೈ ವಿಜಯೇಂದ್ರ ಸ್ಪರ್ಧಿಸಬೇಕು ಎಂದು’ಒತ್ತಡ ಇದೆ. ಆದರೆ ವರುಣದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನನ್ನ ಕ್ಷೇತ್ರ ಶಿಕಾರಿಪುರದಿಂದಲೇ ಸ್ಪರ್ಧಿಸುವಂತೆ ಸೂಚಿಸಿದ್ದೇನೆ. ವಿಜಯೇಂದ್ರ ಶಿಕಾರಿಪುರದಿಂದಲೇ ಸ್ಪರ್ಧಿಸಬೇಕೇಂದು ವರಿಷ್ಠರಿಗೆ ಹೇಳುವೆ. ಎಷ್ಟೇ ಒತ್ತಡವಿದ್ದರೂ ಬಿವೈ ವಿಜಯೇಂದ್ರ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡುತ್ತಾರೆ ಎಂದು ನುಡಿದರು.ಇನ್ನೂ ನಾಲ್ಕೈದು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಬಿಎಸ್ ವೈ ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version