ಪಾಸ್ ಪೋರ್ಟ್, ವೀಸಾ ರದ್ದುಗೊಳಿಸುತ್ತೇವೆ: ಪ್ರತಿಭಟನಾ ನಿರತ ರೈತರಿಗೆ ಹರ್ಯಾಣ ಪೊಲೀಸರ ಎಚ್ಚರಿಕೆ

ರೈತರು ಗುರುವಾರ ದೆಹಲಿಗೆ ತಮ್ಮ ಮೆರವಣಿಗೆಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಇದೇ ಬೆನ್ನಲ್ಲೇ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರದಲ್ಲಿ ಭಾಗಿಯಾಗಿರುವವರ ಪಾಸ್ ಪೋರ್ಟ್ ಮತ್ತು ವೀಸಾಗಳನ್ನು ರದ್ದುಗೊಳಿಸುವ ಎಚ್ಚರಿಕೆಯನ್ನು ಹರ್ಯಾಣ ಪೊಲೀಸರು ನೀಡಿದ್ದಾರೆ.
ಪಂಜಾಬ್ ನ ಪ್ರತಿಭಟನಾನಿರತ ರೈತರು ಫೆಬ್ರವರಿ 13 ರಿಂದ ಪಂಜಾಬ್-ಹರ್ಯಾಣ ಗಡಿಯಲ್ಲಿರುವ ಖಾನೌರಿ ಮತ್ತು ಶಂಭು ಪಾಯಿಂಟ್ ಗಳಲ್ಲಿ ಬೀಡು ಹೂಡಿದ್ದಾರೆ. ಫೆಬ್ರವರಿ ೨೯ ರಂದು ಮೆರವಣಿಗೆಯ ಬಗ್ಗೆ ಕರೆ ನೀಡುವುದಾಗಿ ಅವರು ಹೇಳಿದರು.
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಗೆ ಕಾನೂನು ಖಾತರಿ ಮತ್ತು ಕೃಷಿ ಸಾಲ ಮನ್ನಾ ಸೇರಿದಂತೆ ತಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ರೈತರು ಆಂದೋಲನ ನಡೆಸುತ್ತಿದ್ದಾರೆ.
ಫೆಬ್ರವರಿ 21 ರಂದು ಬಟಿಂಡಾ ಮೂಲದ ಶುಭಕರನ್ ಸಿಂಗ್ (22) ಅವರ ಸಾವಿಗೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ. ಖನೌರಿಯಲ್ಲಿ ಪ್ರತಿಭಟನಾ ನಿರತ ರೈತರೊಂದಿಗಿನ ಘರ್ಷಣೆಯಲ್ಲಿ ಹನ್ನೆರಡು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth