ಶಾಲೆಗಳಲ್ಲಿ ಕೋವಿಡ್ ಮಾರ್ಗ ಸೂಚಿ ಜಾರಿ ಆಗುತ್ತಾ?: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ - Mahanayaka

ಶಾಲೆಗಳಲ್ಲಿ ಕೋವಿಡ್ ಮಾರ್ಗ ಸೂಚಿ ಜಾರಿ ಆಗುತ್ತಾ?: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ

madhubangarappa
27/05/2025


Provided by

ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಳವಾಗಿರುವ ಹಿನ್ನೆಲೆ ಆತಂಕ ಸೃಷ್ಟಿಯಾಗಿದೆ. ಈ ನಡುವೆ ಶಾಲೆಗಳು ಕೂಡ ಆರಂಭವಾಗಲಿದ್ದು, ಶಾಲೆಗಳಲ್ಲಿ ಕೊವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ ಬರಲಿದೆಯೇ ಎನ್ನುವ ಅನುಮಾನಗಳು ಕೇಳಿ ಬಂದಿದ್ದವು. ಇದೀಗ ೀ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ,  ಮೇ 29ರಿಂದ ಶಾಲೆಗಳು ಪ್ರಾರಂಭಗೊಳ್ಳುತ್ತಿದೆ. ಸದ್ಯ ಶಾಲೆಗಳಿಗೆ ಯಾವುದೇ ಮಾರ್ಗ ಸೂಚಿಗಳನ್ನು ಕೊಡುವುದಿಲ್ಲ. ಎಚ್ಚರಿಕೆ ಹಾಗೂ ಮುಂಜಾಗೃತ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಆರೋಗ್ಯ ಇಲಾಖೆ ಮಾರ್ಗ ಸೂಚಿ ನೀಡಿದರೆ ಅದನ್ನು ಅನುಷ್ಠಾನಕ್ಕೆ ತರುತ್ತೇವೆ. ಇಲ್ಲಿಯವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ನೀಡಿಲ್ಲ ಎಂದು ಅವರು ತಿಳಿಸಿದರು.

ಸಿಎಂ ಸೋಮವಾರ ಸಭೆ ಮಾಡಿದ್ದಾರೆ. ಅವರ ನಿರ್ದೇಶನಗಳನ್ನು ಪಾಲಿಸುತ್ತೇವೆ, ಮುಂಜಾಗೃತಾ ಕ್ರಮವಾಗಿ ಮಾಸ್ಕ್ ಧರಿಸುವುದು ಉತ್ತಮ ಎಂದು ಅವರು ಅಭಿಪ್ರಾಯಪಟ್ಟರು.

ಆರೋಗ್ಯದಲ್ಲಿ ವ್ಯತ್ಯಾಸವಿರುವ ಮಕ್ಕಳು ಶಾಲೆಗೆ ಬರುವುದು ಬೇಡ ಎನ್ನುವ ನಿರ್ಧಾರ ಸೋಮವಾರ ನಡೆದ ಸಿಎಂ ಸಭೆಯಲ್ಲಿ ನಿರ್ಧಾರ ಆಗಿದೆ. ಶಿಕ್ಷಕರು, ಮಕ್ಕಳು, ಪೋಷಕರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಎಂದು ಅವರು ಸಲಹೆ ನೀಡಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ