ಪೋಕ್ಸೋ ಕೇಸ್ ನಲ್ಲಿ ಅರೆಸ್ಟ್ ಆಗ್ತಾರಾ ಮಾಜಿ ಸಿಎಂ ಯಡಿಯೂರಪ್ಪ?

yediyurappa
13/06/2024

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಇತ್ತೀಚೆಗೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ದೂರು ದಾಖಲಾಗಿತ್ತು.  ಈ ಪ್ರಕರಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನಲಾಗುತ್ತಿದೆ.

ತಮ್ಮ ಪುತ್ರಿಯ ಮೇಲೆ ಯಡಿಯೂರಪ್ಪನವರು ಲೈಂಗಿಕ ಕಿರುಕುಳ ಎಸಗಿದ್ದಾರೆಂದು ಆರೋಪಿಸಿ ಮಾ. 14ರಂದು ಬೆಂಗಳೂರಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು.  ಆ ಮಹಿಳೆ ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾಗಿದ್ದರು.

ಹೀಗಾಗಿ  ಮೃತಳ ಸೋದರ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯೊಂದನ್ನು ಸಲ್ಲಿಸಿ, ಲೋಕಸಭಾ ಚುನಾವಣೆಗೂ ಮುನ್ನಾ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಬಂಧಿಸಬೇಕೆಂದು ಕೋರಿದ್ದರು. ಅಲ್ಲದೆ, ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ವಿರುದ್ಧ ಕೇಸ್ ದಾಖಲಿಸಿ ಹಲವು ತಿಂಗಳು ಕಳೆದಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ, ಕೂಡಲೇ ಅವರನ್ನು ಬಂಧಿಸಬೇಕೆಂದು  ಎಂದು ಅರ್ಜಿಯಲ್ಲಿ ಮನವಿ  ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಈ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಕೈಗೆತ್ತಿಕೊಳ್ಳಲಿದೆ. ಯಡಿಯೂರಪ್ಪನವರ ಬಂಧನಕ್ಕೆ ಆದೇಶ ನೀಡಿದರೆ, ಯಡಿಯೂರಪ್ಪ ಬಂಧನ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version