11:07 AM Saturday 23 - August 2025

ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಲು ಹೋಗುತ್ತೇನೆ: ಸಚಿವ ಜಮೀರ್ ಅಹ್ಮದ್ ಖಾನ್

B Z Zameer Ahmed Khan
03/05/2025

ಬೆಂಗಳೂರು: ದೇಶಕ್ಕೋಸ್ಕರ ಯುದ್ಧ ಮಾಡಲು ನಾನು ರೆಡಿ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದು, ಪ್ರಧಾನಮಂತ್ರಿ ನರೇಂದ್ರ, ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರ ಅವಕಾಶ ಕೊಟ್ಟಿದ್ದೇ ಆದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಹೋಗಲು ಸಿದ್ಧ ಎಂದಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಭಾರತೀಯರು, ನಾವು ಹಿಂದೂಸ್ತಾನಿಗಳು. ನಮಗೂ ಪಾಕಿಸ್ತಾನಕ್ಕೂ ಯಾವ ಸಂಬಂಧಾನೂ ಇಲ್ಲ. ಯುದ್ಧ ಮಾಡಬೇಕು ಎಂದರೆ ನಾನು ರೆಡಿ. ಮಂತ್ರಿಯಾಗಿ ನನ್ನನ್ನು ಕಳುಹಿಸುತ್ತಾರೆ ಎಂದರೆ ನಾನು ಸಿದ್ಧ. ಯುದ್ಧಕ್ಕೆ ನಾನು ಹೋಗುತ್ತೇನೆ. ದೇಶಕ್ಕಾಗಿ ಯುದ್ಧ ಮಾಡಲು ನಾನು ರೆಡಿ ಎಂದಿದ್ದಾರೆ.

ನಾನು ತಮಾಷೆಗೆ, ಜೋಶ್ನಲ್ಲಿ ಹೇಳುತ್ತಿಲ್ಲ. ಈ ದೇಶಕ್ಕೋಸ್ಕರ ಹೋಗುತ್ತೇನೆ, ನರೇಂದ್ರ ಮೋದಿ, ಅಮಿತ್ ಶಾ ಅವ್ರು ಶಸ್ತ್ರಾಸ್ತ್ರವನ್ನು ನನ್ನ ಕೈಗೆ ಕೊಡಲಿ. ಅಲ್ಲಾ ಮೇಲೆ ಆಣೆ, ಶಸ್ತ್ರಾಸ್ತ್ರವನ್ನು ಬೆನ್ನಲ್ಲಿ ಕಟ್ಟಿಕೊಂಡು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಲು ಹೋಗುತ್ತೇನೆ ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version