ಟ್ರಂಪ್ ಆಕ್ರಮಣಕಾರಿ ವ್ಯಾಪಾರ ನೀತಿ: ಭಾರತದ ಮೊದಲ ಪ್ರತಿಕ್ರಿಯೆ

ನವದೆಹಲಿ: ಭಾರತದಿಂದ ಅಮೆರಿಕಕ್ಕೆ ರಫ್ತು ಮಾಡುವ ಸರಕುಗಳ ಮೇಲೆ 25% ಸುಂಕ ಮತ್ತು ‘ದಂಡ’ ವಿಧಿಸುವ ಡೊನಾಲ್ಡ್ ಟ್ರಂಪ್ ಅವರ ಆಕ್ರಮಣಕಾರಿ ವ್ಯಾಪಾರ ನೀತಿಯ ಘೋಷಣೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದ್ದು, “ನಮ್ಮ ರಾಷ್ಟ್ರೀಯ ಹಿತಾಸಕ್ತಿಯನ್ನು ಭದ್ರಪಡಿಸಿಕೊಳ್ಳಲು” ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದೆ.
ಟ್ರಂಪ್ ಅವರ ಆಡಂಬರಕ್ಕೆ ವ್ಯತಿರಿಕ್ತವಾಗಿ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಪ್ರತಿಕ್ರಿಯಿಸಿದ್ದು, ಅಮೆರಿಕದೊಂದಿಗೆ ನ್ಯಾಯಯುತ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಮಾತುಕತೆ ನಡೆಸಲು ಭಾರತ ಬದ್ಧವಾಗಿದೆ, ವ್ಯಾಪಾರ ಒಪ್ಪಂದದ ಕುರಿತು ತಿಂಗಳುಗಳಿಂದ ಮಾತುಕತೆಗಳು ನಡೆಯುತ್ತಿದೆ ಎನ್ನುವುದನ್ನು ನಾವು ಗಮನಿಸಿದ್ದೇವೆ ಎಂದಿದೆ.
ದ್ವಿಪಕ್ಷೀಯ ವ್ಯಾಪಾರದ ಕುರಿತು ಅಮೆರಿಕ ಅಧ್ಯಕ್ಷರ ಹೇಳಿಕೆಯನ್ನು ಭಾರತ ಸರ್ಕಾರ ಗಮನಿಸಿದೆ. ಸರ್ಕಾರವು ಅದರ ಪರಿಣಾಮಗಳನ್ನು ಅಧ್ಯಯನ ಮಾಡುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತ ಮತ್ತು ಅಮೆರಿಕ ನ್ಯಾಯಯುತ, ಸಮತೋಲಿತ ಮತ್ತು ಪರಸ್ಪರ ಪ್ರಯೋಜನಕಾರಿ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಮುಕ್ತಾಯಗೊಳಿಸುವ ಕುರಿತು ಮಾತುಕತೆಗಳಲ್ಲಿ ತೊಡಗಿವೆ. ನಾವು ಆ ಉದ್ದೇಶಕ್ಕೆ ಬದ್ಧರಾಗಿದ್ದೇವೆ” ಎಂದು ಸಚಿವಾಲಯ ಬುಧವಾರ ಸಂಜೆ ಹೇಳಿಕೆಯಲ್ಲಿ ತಿಳಿಸಿದೆ.
ನಮ್ಮ ರೈತರು, ಉದ್ಯಮಿಗಳು ಮತ್ತು MSME ಗಳ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು) ಕಲ್ಯಾಣವನ್ನು ರಕ್ಷಿಸುವ ಮತ್ತು ಉತ್ತೇಜಿಸುವ ಬಗ್ಗೆ ಕೇಂದ್ರವು “ಅತ್ಯಂತ ಪ್ರಾಮುಖ್ಯತೆಯನ್ನು” ನೀಡುತ್ತದೆ ಎಂದು ಒತ್ತಿ ಹೇಳಿದ ಸಚಿವಾಲಯ, ಇತ್ತೀಚೆಗೆ ಯುನೈಟೆಡ್ ಕಿಂಗ್ ಡಮ್‌ನೊಂದಿಗೆ ಮುಕ್ತಾಯಗೊಂಡ ಮುಕ್ತ ವ್ಯಾಪಾರ ಒಪ್ಪಂದವನ್ನು ಸಹ ಉಲ್ಲೇಖಿಸಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD