ಗ್ಯಾರೆಂಟಿ ಯೋಜನೆ ನಿಲ್ಲುತ್ತಾ?: ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

ಉಡುಪಿ: ಬಡವರ ಅನುಕೂಲಕ್ಕೆ ಇರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಬಡತನ ನಿರ್ಮೂಲನೆಗಾಗಿ ಗ್ಯಾರಂಟಿ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ ದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಲೋಕಸಭೆ ಚುನಾವಣೆಯಲ್ಲಿ ಬಹಳಷ್ಟು ಕಡೆ ನಾವು ಸೋತಿದ್ದೇವೆ. ಈ ಸೋಲಿನ ವಿಶ್ಲೇಷಣೆ, ಆತ್ಮವಲೋಕನ ಮಾಡು ನಿಟ್ಟಿನಲ್ಲಿ ಹಿರಿಯರ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಿದ್ದೇವೆ ಎಂದರು.
ಗ್ಯಾರಂಟಿ ಯೋಜನೆಗಳು ಎಷ್ಟು ಪ್ರಭಾವ ಬೀರಿದೆ ಎಂಬುದನ್ನು ಚರ್ಚಿಸಲಾಗುವುದು. ರಾಜಕೀಯಕ್ಕೆ ಸಂಬಂಧಿಸಿದ ತೀರ್ಮಾನವನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಸಂಪುಟ ಪುನಾರಚನೆ ನಿರ್ಧಾರವನ್ನು ಮುಖ್ಯ ಮಂತ್ರಿಯವರು ಕೈಗೊಳ್ಳುವರು. ಆ ಬಗ್ಗೆ ನನ್ನಲ್ಲಿ ಮಾಹಿತಿ ಇಲ್ಲ ಎಂದರು.
ಕರಾವಳಿಯಲ್ಲೂ ಪಕ್ಷ ಸಂಘ ಟನೆಯ ಕಾರ್ಯ ಆಗಬೇಕಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿನ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊ ಳ್ಳುತ್ತೇವೆ. ರಾಜಕೀಯ ವ್ಯವಸ್ಥೆ ಬೇರೆ, ಆಡಳಿತಾತ್ಮಕ ವ್ಯವಸ್ಥೆ ಬೇರೆ. ರಾಜಕೀಯ ವ್ಯವಸ್ಥೆಯಲ್ಲಿ ಉಸ್ತುವಾರಿ ಸಚಿವರು ಬರುವುದಿಲ್ಲ. ಹೀಗಾಗಿ ಉಡುಪಿಯ ಸೋಲಿಗೂ ಉಸ್ತುವಾರಿ ಸಚಿವರಿಗೂ ಸಂಬಂಧವಿಲ್ಲ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JuQTBF5KG6PG6v5YZnySxb