ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ: ರಸ್ತೆಗುರುಳಿದ ಬೃಹತ್ ಮರ

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿ–ಮಳೆಗೆ ಬೃಹತ್ ಮರವೊಂದು ರಸ್ತೆ ಗುರುಳಿದ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿದೆ. ಮೂಡಿಗೆರೆಯಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸೋ ಮಾರ್ಗ ಇದಾಗಿದೆ.
ಘಟನೆಯಿಂದಾಗಿ ಸುಮಾರು ಅರ್ಧ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಇದೇ ವೇಳೆ ಸ್ಥಳೀಯರು ತಕ್ಷಣವೇ ಮರವನ್ನು ತೆರವು ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.
ಭಾರೀ ಗಾಳಿಯಿಂದ ಮಲೆನಾಡಲ್ಲಿ ಅಲ್ಲಲ್ಲಿ ಮರಗಳು ಬೀಳುತ್ತಿರುವ ಘಟನೆ ವಾಹನ ಸವಾರರನ್ನು ಆತಂಕಕ್ಕೀಡು ಮಾಡಿದೆ. ಚಲಿಸುತ್ತಿದ್ದ ವೇಳೆ ವಾಹನಗಳ ಮೇಲೆ ಮರ ಬಿದ್ದರೆ ಏನು ಗತಿ!? ಎಂದು ಚಾಲಕರು ಭಯಭೀತರಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97