6:25 PM Wednesday 20 - August 2025

ವಯನಾಡ್ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಇಂದು ಅಧಿಕಾರ ಸ್ವೀಕಾರ

28/11/2024

ವಯನಾಡ್ ಲೋಕಸಭಾ ಕ್ಷೇತ್ರವನ್ನು ಗೆದ್ದ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಂದೇಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 5,86,788 ಮತಗಳನ್ನು ಪಡೆದ ನಂತರ ಕಾಂಗ್ರೆಸ್ ಮುಖಂಡ ರವೀಂದ್ರ ವಸಂತರಾವ್ ಚವಾಣ್ ಅವರು ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಯನಾಡ್ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಸಿಪಿಐ) ಸತ್ಯನ್ ಮೊಕೇರಿ ವಿರುದ್ಧ 4,10,931 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿರುವ ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ, ಬಿಜೆಪಿಯ ನವ್ಯಾ ಹರಿದಾಸ್ ಮತ್ತು ಸಿಪಿಐನ ಸತ್ಯನ್ ಮೊಕೇರಿ ನಡುವೆ ತ್ರಿಕೋನ ಸ್ಪರ್ಧೆ ಇತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version