ಬೊಮ್ಮಾಯಿ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ವಾಪಸ್ ಪಡೆಯಿರಿ: ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿಯವರ ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಿರಿ ಎಂದು ಮೈಸೂರಿನ ಶಾಸಕ ತನ್ವೀರ್ ಸೇಠ್ರವರು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ವಿದ್ಯುತ್ ಬೆಲೆ ಏರಿಕೆ ನಿರ್ಧಾರವನ್ನು ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ಆದರೆ ಜನರು ಈಗಿನ ಕಾಂಗ್ರೆಸ್ ಸರ್ಕಾರ ಬೆಲೆ ಏರಿಸಿದೆ ಎಂದು ತಪ್ಪು ಇಳಿಸಿದ್ದಾರೆ. ಇದರಿಂದ ಪಕ್ಷದ ಗೌರವ ಹಾಳಾಗುತ್ತಿದೆ. ಹಾಗಾಗಿ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ವಾಪಸ್ ಪಡೆಯಿರಿ ಎಂದು ಅವರು ಒತ್ತಾಯಿಸಿದ್ದಾರೆ.
2003 ರ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ಕೆಲವು ಜನಪರ ಘೋಷಣೆಗಳನ್ನು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಲಾಗಿತ್ತು. ಜನಪರ ಘೋಷಣೆಗೆ ಮಾರಕವಾಗಿ ಸ್ಪಂದಿಸಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಪಚಂಡ ಬಹುಮದೊಂದಿಗೆ ಗೆಲ್ಲಿಸಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ 5 ಗ್ಯಾರಂಟಿಗಳನ್ನು ಸರ್ಕಾರ ರಚನೆಯಾದ ದಿನವೇ ಅನುಷ್ಠಾನಗೊಳಿಸಲು ಸೂಕ್ತ ಆದೇಶವನ್ನು ಹೊರಡಿಸಲಾಗಿದೆ. ಗ್ಯಾರೆಂಟಿಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ನ್ನು ಉಚಿತವಾಗಿ ನೀಡುವುದು. ಆದರೆ ಈ ಘೋಷಣೆಗೆ ವ್ಯತಿರಿಕ್ತವೆಂಬಂತೆ ಕರ್ನಾಟಕ ವಿದ್ಯಾತ್ ನಿಯಂತ್ರಣ ಮಂಡಳಿಯಿಂದ ರಾಜ್ಯದ ಎಲ್ಲಾ ವಿದ್ಯುತ್ ನಿಗಮಗಳಲ್ಲಿ ಏಪ್ರಿಲ್ 2023 ರಿಂದ ಪೂರ್ವಾನ್ವಯವಾಗುವಂತೆ ವಿದ್ಯುತ್ ದರವನ್ನು ಹೆಚ್ಚಿಸಲಾಗಿದೆ ಎಂದಿದ್ದಾರೆ.
ಇದು ಈಗಾಗಲೇ ಹಿಂದಿನ ಸರ್ಕಾರದಲ್ಲಿ ಹೆಚ್ಚಾಗಿದ್ದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳದ ಜನಸಾಮಾನ್ಯರ ಗಾಯದ ಮೇಲೆ ಬರೆ ಏಳೆದಂತಾಗಿದೆ. ಪ್ರಸ್ತುತ ಸರ್ಕಾರ ಘೋಷಿಸಿರುವ 200 ಯೂನಿಟ್ ಉಚಿತ ಸೌಲಭ್ಯವನ್ನು ಜನ ಸಾಮಾನ್ಯರಿಗೆ ನೀಡಿ ಕಿತ್ತುಕೊಂಡಂತಾಗಿದೆ. ವಿದ್ಯುತ್ ಬೆಲೆ ಏರಿಸಲು ನಿಗಮಗಳು 30.11.2022 ರಲ್ಲಿ ಮಂಡಳಿಗಳಿಗೆ ಪ್ರಸ್ತಾವನೆಯನ್ನು ನಿಲ್ಲಿಸಿದ್ದು, ಬೆಲೆ ಏರಿಸಿ ಆದೇಶವನ್ನು ಮೇ 2023 ಅಲ್ಲಿ ಏಪ್ರಿಲ್ 2003 ಅಂದ ಪೂರ್ವಾನ್ವಯವಾಗುವಂತೆ ನೀಡಲಾಗಿದೆ. ಆದರೆ ಜನ ಸಾಮಾನ್ಯರು ಬೆಲೆಯನ್ನು ಪ್ರಸ್ತುತ ಸರ್ಕಾರ ಹೆಚ್ಚಿಸಿರುವುದಾಗಿ ತಿಳಿದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ವಿದ್ಯುತ್ ಬೆಲೆ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ಮರು ಪರಿಶೀಲಿಸಿ ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಜಾರಿಗೊಳಿಸಲು ತಮ್ಮಲ್ಲಿ ಕೋರಿಕೊಳ್ಳುತ್ತೇನೆ ಎಂದು ತನ್ವೀರ್ ಸೇಠ್ ಪತ್ರದಲ್ಲಿ ಬರೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw