ಬಾಯ್ಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಅತ್ಯಾಚಾರ!

Mahanayaka –ಕೋಲ್ಕತ್ತಾ: ಬಾಯ್ಸ್ ಹಾಸ್ಟೆಲ್ ನಲ್ಲಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್-ಕಲ್ಕತ್ತಾ ವಿದ್ಯಾರ್ಥಿನಿಯೊಬ್ಬಳಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ ನಡೆಸಿರುವ ಘಟನೆ ಬಿಸಿನೆಸ್ ಸ್ಕೂಲ್ ನ ಹಾಸ್ಟೆಲ್ ನೊಳಗೆ ಶನಿವಾರ ನಡೆದಿದೆ.
ಘಟನೆ ಸಂಬಂಧ ಹರಿದೇವ್ ಪುರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಎಫ್ ಐಆರ್ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
ಕೌನ್ಸೆಲಿಂಗ್ ಸೆಷನ್ ಗಾಗಿ ವಿದ್ಯಾರ್ಥಿನಿಯನ್ನು ಹಾಸ್ಟೆಲ್ ಗೆ ಕರೆದಿದ್ದ ಆರೋಪಿ ಬಳಿಕ ಡ್ರಗ್ಸ್ ಬೆರೆಸಿದ ಪಾನೀಯ ನೀಡಿದ್ದು, ಪಾನೀಯ ಸೇವಿಸಿದ ಬಳಿಕ ವಿದ್ಯಾರ್ಥಿನಿ ಪ್ರಜ್ಞಾಹೀನಳಾಗಿದ್ದಾಳೆ. ಪ್ರಜ್ಞೆ ಬಂದ ವೇಳೆ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎನ್ನುವುದು ಆಕೆಗೆ ಅರಿವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಕೃತ್ಯದ ಬಗ್ಗೆ ಯಾರಿಗಾದರೂ ವಿಷಯ ತಿಳಿಸಿದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ಬಳಿಕ ಬೆದರಿಕೆ ಹಾಕಿದ್ದ. ನಿನ್ನೆ ರಾತ್ರಿಯೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲ್ಕತ್ತಾದ ಕಾನೂನು ಕಾಲೇಜಿನೊಳಗೆ ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಸುಮಾರು ಹದಿನೈದು ದಿನಗಳ ನಂತರ ಇದೀಗ ಮತ್ತೊಂದು ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: