ಯುಪಿ ಸಿಎಂ ಯೋಗಿ ಮನೆ ಮುಂದೆ ಮಹಿಳೆಯಿಂದ ಆತ್ಮಹತ್ಯೆಗೆ ಯತ್ನ
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ರ ನಿವಾಸದ ಹೊರಗಡೆ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದಿತ್ಯನಾಥ್ ರ ಜನತಾ ದರ್ಬಾರ್‌ಗೆ ತಮ್ಮ ಸಮಸ್ಯೆ ಹೇಳಲು ಬಂದಿದ್ದರು. ಅಲ್ಲಿ ಯಾವುದೇ ಪರಿಹಾರ ಕಂಡುಬಂದಿಲ್ಲ. ಇದರಿಂದ ನೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರ ಜನತಾ ದರ್ಬಾರ್ ನಿಂದ ಹೊರಬಂದ ಕೂಡಲೇ ಮಹಿಳೆಯು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ಕಂಬಳಿ ಬಳಸಿ ಬೆಂಕಿ ಆರಿಸಿದ್ದಾರೆ.
ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಅಂಜಲಿ ಜಾತವ್. ಅವರು ಕೌಟುಂಬಿಕ ಕಲಹದಿಂದಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಥಳೀಯ ಮಟ್ಟದಲ್ಲಿ ಸಮಸ್ಯೆ ಪರಿಹರಿಸಲು ಸಾಧ್ಯವಾಗದಿದ್ದಾಗ, ಮಹಿಳೆಯು ಇಂದು ಸಿಎಂ ಯೋಗಿ ಆದಿತ್ಯನಾಥ್ ರ ಜನತಾ ದರ್ಬಾರ್‌ಗೆ ತಮ್ಮ ಸಮಸ್ಯೆ ಹೇಳಲು ಬಂದಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth